ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಗಲಕೋಟೆ: 17,384 ಶಾಲೆಗಳಿಗಿಲ್ಲ ಮೈದಾನ; ಮೂಲಸೌಲಭ್ಯ ಕೊರತೆಯಿಂದ ತೊಂದರೆ

Published 21 ಡಿಸೆಂಬರ್ 2023, 8:03 IST
Last Updated 21 ಡಿಸೆಂಬರ್ 2023, 8:03 IST
ಅಕ್ಷರ ಗಾತ್ರ

ಬಾಗಲಕೋಟೆ: ರಾಜ್ಯದಲ್ಲಿ 46,757 ಸರ್ಕಾರಿ ಶಾಲೆಗಳಿದ್ದು, ಆಟದ ಮೈದಾನ, ಶೌಚಾಲಯ ಸೇರಿ ಹಲವು ಸೌಲಭ್ಯಗಳಿಲ್ಲ. 17,384 ಶಾಲೆಗಳಿಗೆ ಮೈದಾನ ಮತ್ತು 4,876 ಶಾಲೆಗಳಿಗೆ ಕಾಂಪೌಂಡ್‌ ಇಲ್ಲ.

23 ಶಾಲೆಗಳಲ್ಲಿ ಶೌಚಾಲಯಗಳಿಲ್ಲ. ಪ್ರತಿ 40 ಮಕ್ಕಳಿಗೆ ಒಂದು ಶೌಚಾಲಯ ಇರಬೇಕು ಎಂಬ ನಿಯಮ ಇದೆ. ಆದರೆ, ಜಿಲ್ಲೆ ಸೇರಿ ರಾಜ್ಯದ ಹಲವು ಶಾಲೆಗಳಲ್ಲಿ ಮಕ್ಕಳ ಸಂಖ್ಯೆಗೆ ತಕ್ಕಂತೆ ಶೌಚಾಲಯಗಳಿಲ್ಲ.

‘300 ರಿಂದ 450ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿದ ಶಾಲೆಗಳಲ್ಲಿ ಒಂದು ಅಥವಾ ಎರಡು ಶೌಚಾಲಯಗಳಿವೆ. ಬಾಲಕರು ಮತ್ತು ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯಗಳಿಲ್ಲ. ಇರುವ ಒಂದೇ ಶೌಚಾಲಯವನ್ನೇ ಎಲ್ಲರೂ ಬಳಸಬೇಕಾದ ಸ್ಥಿತಿ ಇದೆ. ಬಹುತೇಕ ಶಾಲೆಗಳ ಆವರಣದಲ್ಲಿ ಆಟದ ಮೈದಾನವಿಲ್ಲ. ಇಕ್ಕಟ್ಟಾದ ಜಾಗದಲ್ಲೇ ಮಕ್ಕಳು ಪ್ರಾರ್ಥನೆ ಮಾಡುತ್ತಾರೆ’ ಎಂದು ಶಿಕ್ಷಕರು ತಿಳಿಸಿದರು.

ಬಾಗಲಕೋಟೆ ಜಿಲ್ಲಾ ಕೇಂದ್ರದಲ್ಲೇ ಸರ್ಕಾರಿ ಗಂಡು ಮಕ್ಕಳ ಶಾಲೆ ನಂ.1, ಸರ್ಕಾರಿ ಹೆಣ್ಣುಮಕ್ಕಳ ಶಾಲೆ ನಂ.1 ಮತ್ತು ಸರ್ಕಾರಿ ಶಾಲೆ ನಂ.3 ಸೇರಿ ಹಲವು ಶಾಲೆಗಳಲ್ಲಿ ಆಟದ ಮೈದಾನವಿಲ್ಲ.

‘ಶಾಲೆಯಲ್ಲಿ ಮೈದಾನವಿರದ ಕಾರಣ ಆಟವಾಡಲು ಸಾಧ್ಯವಾಗುತ್ತಿಲ್ಲ. ವಲಯ, ತಾಲ್ಲೂಕು ಸೇರಿ ಯಾವ ಕ್ರೀಡಾಕೂಟದಲ್ಲೂ ಭಾಗವಹಿಸಲು ಆ‌ಗುತ್ತಿಲ್ಲ’ ಎಂದು ಬಾಲಕಿಯೊಬ್ಬಳು ತಿಳಿಸಿದಳು.

‘ಬಾಗಲಕೋಟೆ ಜಿಲ್ಲೆಯಲ್ಲಿ 137 ಶಾಲೆಗಳಿಗೆ ಕಾಂಪೌಂಡಿಲ್ಲ. ಉದ್ಯೋಗ ಖಾತ್ರಿ ಯೋಜನೆಯಡಿ ಕಾಂಪೌಂಡ್‌ ನಿರ್ಮಾಣಕ್ಕೆ ಜಿಲ್ಲಾ ಪಂಚಾಯಿತಿಗೆ ಮನವಿ ಮಾಡಲಾಗಿದೆ’ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಬಿ.ಕೆ. ನಂದನೂರ ‘ಪ್ರಜಾವಾಣಿ’ಗೆ ತಿಳಿಸಿದರು.

ಗುಳೇದಗುಡ್ಡದ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂ.2ಕ್ಕೆ ಕಾಂಪೌಂಡ್‌ ನಿರ್ಮಿಸಿಲ್ಲ
ಗುಳೇದಗುಡ್ಡದ ಸರ್ಕಾರಿ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ನಂ.2ಕ್ಕೆ ಕಾಂಪೌಂಡ್‌ ನಿರ್ಮಿಸಿಲ್ಲ
ಸರ್ಕಾರಿ ಶಾಲೆಗಳು ಸೌಲಭ್ಯ ಕೊರತೆ ಎದುರಿಸುತ್ತಿರುವುದು ಗಮನದಲ್ಲಿ ಇದೆ. ಈ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು.
ಬಿ.ಕೆ. ನಂದನೂರ ಉಪನಿರ್ದೇಶಕ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬಾಗಲಕೋಟೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT