ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

‘ಮೂಢನಂಬಿಕೆ ಬಿಟ್ಟು, ನೈರ್ಮಲ್ಯ ಕಾಪಾಡಿಕೊಳ್ಳಿ‘

Published 25 ಮೇ 2024, 14:15 IST
Last Updated 25 ಮೇ 2024, 14:15 IST
ಅಕ್ಷರ ಗಾತ್ರ

ಬಾಗಲಕೋಟೆ: ‘ಋತುಚಕ್ರದ ಬಗ್ಗೆ ಇರುವ ಮೂಢನಂಬಿಕೆಗಳನ್ನು ಬಿಟ್ಟು ನೈರ್ಮಲ್ಯ ಕಾಪಾಡಿಕೊಳ್ಳಬೇಕು’ ಎಂದು ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ದಿವ್ಯಾ ಮಿರ್ಜಿ ಹೇಳಿದರು.

ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐಕ್ಯೂಎಸಿ, ಮಹಿಳಾ ಸಬಲೀಕರಣ ಘಟಕ ಮತ್ತು ಭಾರತ ಸ್ಕೌಟ್ಸ್ ಆ್ಯಂಡ್ ಗೈಡ್ಸ್ ಸಹಯೋಗದಲ್ಲಿ ಋತುಚಕ್ರ ನೈರ್ಮಲ್ಯ ಜಾಗೃತಿ ಅಭಿಯಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಪಶುಪತಿ ಜಿಗಜಿನ್ನಿ ಮಾತನಾಡಿ, ಮಾನಸಿಕ ಒತ್ತಡದದ ಕಾರಣ ಹೆಣ್ಣುಮಕ್ಕಳಲ್ಲಿ ಕಂಡು ಬರುವ ಸ್ಕಿಜೋಫ್ರೀನಿಯಾ ರೋಗದ ಲಕ್ಷಣ ಹಾಗೂ ಪರಿಹಾರಗಳು ಕುರಿತು ಮಾಹಿತಿ ನೀಡಿದರು.

ಅಧ್ಯಕ್ಷತೆ ವ‌ಹಿಸಿದ್ದ ಪ್ರಾಚಾರ್ಯ ಅರುಣಕುಮಾರ ಗಾಳಿ ಮಾತನಾಡಿ, ವಿಜ್ಞಾನ ಯುಗದಲ್ಲಿ ಮಹಿಳೆಯರು ಋತುಚಕ್ರದ ನೈರ್ಮಲ್ಯದ ಬಗೆಗೆ ಅರಿತುಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.

ಐಕ್ಯೂಎಸಿ ಸಂಚಾಲಕ ಪ್ರೊ.ಅಜೀತ್ ನಾಗರಾಳೆ, ಡಾ.ಸುಮಂಗಲಾ ಮೇಟಿ, ಡಾ.ಮೂಬಿನ್ ಬೆಳಗಾಂ, ಡಾ.ಸುಮನ್ ಮುಚಖಂಡಿ, ಪ್ರೊ.ಪರಸಪ್ಪ ತಳವಾರ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT