ಬಾಗಲಕೋಟೆ: ನಗರದಲ್ಲಿರುವ ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರಿಕೆಟ್ ವಿಶ್ವಕಪ್ ಫೈನಲ್ ಪಂದ್ಯ ವೀಕ್ಷಣೆಗೆ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ಬೃಹತ್ ಎಲ್‌ಇಡಿ ಪರದೆ ಅಳವಡಿಸಲಾಗುತ್ತಿದೆ.
ಮಧ್ಯಾಹ್ನ 2 ರಿಂದ ಪಂದ್ಯ ಮುಗಿಯುವವರೆಗೆ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗುವುದು ಎಂದು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಗುರುಪಾದ ಅವರು ತಿಳಿಸಿದ್ದಾರೆ.
ಕ್ರೀಡಾ ವಸತಿ ನಿಲಯದಲ್ಲಿರುವ 100 ಮಕ್ಕಳು ವೀಕ್ಷಣೆ ಮಾಡಲಿದ್ದು, ಅವರೊಂದಿಗೆ ಸಾರ್ವಜನಿಕರಿಗೂ ಅವಕಾಶ ಕಲ್ಪಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.