ಜಮಖಂಡಿ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಸಾಕು ಪ್ರಾಣಿಗಳನ್ನು ಕೊಂದು ಆತಂಕ ಸೃಷ್ಟಿಸಿದ್ದ ಚಿರತೆ ಸೋಮವಾರ ಬೆಳಗಿನ ಜಾವ ಬೋನಿಗೆ ಬಿದ್ದಿದೆ.

ತಾಲ್ಲೂಕಿನ ಕೆಡಿ ಜಂಬಗಿ ಗ್ರಾಮದಲ್ಲಿ ಚಿರತೆ ಕಾಣಿಸಿ ಕೊಂಡಿತ್ತು. ಗ್ರಾಮಸ್ಥರ ಮಾಹಿತಿಯ ಮೇರೆಗೆ ಅರಣ್ಯ ಅಧಿಕಾರಿಗಳು ಚಿರತೆಯ ಚಲನ ವಲನವನ್ನು ಗಮನಿಸಿ ಬಲೆ ಬೀಸಿದ್ದರು. ಸಿ.ಸಿ ಟಿವಿ ಕ್ಯಾಮೆರಾ ಹಾಗೂ ಬೋನ್ಗಳನ್ನು ಅಳವಡಿಸಿದ್ದರು. ಗ್ರಾಮದ ಜನರು ರಾತ್ರಿ ಸಂಚರಿಸದಂತೆ ಹಾಗೂ ಸಾಕು ಪ್ರಾಣಿಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರಿಸುವಂತೆ ಸೂಚಿಸಿದ್ದರು.

ಭಾನುವಾರ ಮತ್ತೇ ಕೆಡಿ ಜಂಬಗಿ ಗ್ರಾಮದ ಸುರೇಶ ಮಲಕನ್ನವರ ಅವರ ತೋಟದಲ್ಲಿ ಚಿರತೆಯ ಚಲನವಲನಗಳು ಕಂಡು ಬಂದ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿತ್ತು. ಸುದ್ದಿ ತಿಳಿದ ತಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಬೋನ್ ಅಳವಡಿಸಿದ್ದರು. ಸೋಮವಾರ ಬೆಳಗಿನ ಜಾವ ಚಿರತೆ ಬೊನಿಗೆ ಬಿದ್ದಿರುವುದು ದೃಢಪಟ್ಟಿದೆ ಎಂದು ಎ.ಸಿ.ಎಫ್ ಪ್ರದೀಪ ರಾಠೋಡ್, ಆರ್.ಎಫ್.ಒ ಕಿರಣ ದಾಸರೆಡ್ಡಿ ಮಾಹಿತಿ ನೀಡಿದ್ದಾರೆ.

ಚಿರತೆಯನ್ನು ಸುರಕ್ಷಿತ ಅರಣ್ಯ ಪ್ರದೇಶಕ್ಕೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಕ್ರಮ ಕೈಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.