ಮಹಾಲಿಂಗಪುರ: ‘ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸುವ ಪ್ರಯತ್ನ ನಡೆದಿದೆ. ನಿವೇಶನ ವಾಪಸ್ ಕೊಟ್ಟಿದ್ದಾರೆಂದರೆ, ಅವರು ಹೋರಾಟಕ್ಕೆ ಸಿದ್ಧರಾಗಿದ್ದಾರೆ ಎಂದರ್ಥ. ‘ಮುಡಾ’ ದಲ್ಲಿ ತಪ್ಪುಗಳು ಆಗಿವೆ. ಅದರ ಬಗ್ಗೆ ಸಮಗ್ರ ತನಿಖೆಯಾಗಲಿ’ ಎಂದು ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ ಹೇಳಿದರು.