ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನೆಲೆ ಮದ್ಯ ಮಾರಾಟ,‌‌ ಸಂತೆ ನಿಷೇಧ

ಗ್ರಾಮ ಪಂಚಾಯಿತಿ ಚುನಾವಣೆ
Published 21 ಜುಲೈ 2023, 13:28 IST
Last Updated 21 ಜುಲೈ 2023, 13:28 IST
ಅಕ್ಷರ ಗಾತ್ರ

ಬಾಗಲಕೋಟೆ: ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ವಿವಿಧ ಕಾರಣಗಳಿಂದ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಜುಲೈ 23 ರಂದು ಮತದಾನ ಜರುಗಲಿರುವ ಹಿನ್ನಲೆಯಲ್ಲಿ ಮದ್ಯ ಮಾರಾಟ, ಜಾತ್ರೆ, ಸಂತೆಗಳನ್ನು ನಿಷೇಧಿಸಲಾಗಿದೆ.

ಬಾಗಲಕೋಟೆ ತಾಲ್ಲೂಕಿನ ಕದಾಂಪುರ, ರಬಕವಿ-ಬನಹಟ್ಟಿ ತಾಲ್ಲೂಕಿನ ಚಿಮ್ಮಡ, ಸಸಾಲಟ್ಟಿ, ಹುನಗುಂದ ತಾಲ್ಲೂಕಿನ ಮುಗನೂರ, ಮುಧೋಳ ತಾಲ್ಲೂಕಿನ ವಜ್ಜರಮಟ್ಟಿ ಹಾಗೂ ಬಾದಾಮಿ ತಾಲ್ಲೂಕಿನ ಕಿತ್ತಲಿ ಗ್ರಾಮಗಳಲ್ಲಿ ಚುನಾವಣೆ ನಡೆಯಲಿದೆ.

ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಜುಲೈ 22ರ ಬೆಳಿಗ್ಗೆ 6 ರಿಂದ ಜುಲೈ 23ರ ಮಧ್ಯರಾತ್ರಿ 12ರವರೆಗೆ ಚುನಾವಣೆ ನಡೆಯುವ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಾನಕಿ ಆದೇಶ ಹೊರಡಿಸಿದ್ದಾರೆ.

ಜುಲೈ 23 ರಂದು ಜರಗುವ ಮತದಾನ ದಿನದಂದು ನಡೆಯುವ ಎಲ್ಲ ಸಂತೆ, ಜಾತ್ರೆ, ದನದ ಜಾತ್ರೆ, ಉತ್ಸವ ಇತ್ಯಾದಿಗಳನ್ನು ಮುಂದೂಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT