ಸ್ಥಳೀಯ ಸಂಸ್ಥೆ ಚುನಾವಣೆ: 11 ನಾಮಪತ್ರ ಸಲ್ಲಿಕೆ

7
-

ಸ್ಥಳೀಯ ಸಂಸ್ಥೆ ಚುನಾವಣೆ: 11 ನಾಮಪತ್ರ ಸಲ್ಲಿಕೆ

Published:
Updated:

ಬಾಗಲಕೋಟೆ: ಜಿಲ್ಲೆಯ 12 ನಗರ, ಪಟ್ಟಣಗಳಲ್ಲಿ ಆಗಸ್ಟ್ 29 ರಂದು ನಡೆಯಲಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸೋಮವಾರ ಒಟ್ಟು 11 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

 ಮುಧೋಳ ತಾಲ್ಲೂಕಿನ ಮಹಾಲಿಂಗಪುರದಲ್ಲಿ 5, ಮುಧೋಳ ಹಾಗೂ ತೇರದಾಳದಲ್ಲಿ ತಲಾ ಎರಡು ನಾಮಪತ್ರ ಸಲ್ಲಿಕೆಯಾಗಿವೆ. ಮುಧೋಳ ಹಾಗೂ ರಬಕವಿ–ಬನಹಟ್ಟಿಯಲ್ಲಿ ತಲಾ ಒಂದು ನಾಮಪತ್ರ ಸಲ್ಲಿಕೆಯಾಗಿದೆ.

ಬಾಗಲಕೋಟೆ, ಬೀಳಗಿ, ಇಳಕಲ್, ಬಾದಾಮಿ, ಹುನಗುಂದ, ಗುಳೇದಗುಡ್ಡ ಹಾಗೂ ಕೆರೂರಿನಲ್ಲಿ ಇಲ್ಲಿಯವರೆಗೆ ಒಂದೂ ನಾಮಪತ್ರ ಸಲ್ಲಿಕೆಯಾಗಿಲ್ಲ. ಆಗಸ್ಟ್ 10 ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ನಾಮಪತ್ರ ಸಲ್ಲಿಸಲು ಆಗಸ್ಟ್ 17 ಕೊನೆಯ ದಿನವಾಗಿದೆ.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !