ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾರದರ್ಶಕ ಚುನಾವಣೆ: ನೀವೂ ಕೈಜೋಡಿಸಿ

ಸಿ–ವಿಜಿಲ್‌ ಆ್ಯಪ್‌ ಮೂಲಕ ದೂರು, ಮಾಹಿತಿಗೆ ಅವಕಾಶ
Published 30 ಮಾರ್ಚ್ 2024, 6:43 IST
Last Updated 30 ಮಾರ್ಚ್ 2024, 6:43 IST
ಅಕ್ಷರ ಗಾತ್ರ

ಬಾಗಲಕೋಟೆ: ಪಾರದರ್ಶಕ ಚುನಾವಣೆ ನಡೆಸಲು ಚುನಾವಣಾ ಆಯೋಗ ಶ್ರಮಿಸುತ್ತದೆ. ಅದಕ್ಕೆ ಸಾರ್ವಜನಿಕರೂ ಕೈಜೋಡಿಸಬೇಕು ಎಂಬ ಕಾರಣಕ್ಕೆ ಸಿ–ವಿಜಿಲ್ ಆ್ಯಪ್‌ ಇದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಯ ಮಾಹಿತಿಯನ್ನು ಅಲ್ಲಿ ಅಪ್‌ಲೋಡ್‌ ಮಾಡಬಹುದಾಗಿದೆ.

ಚುನಾವಣೆಯ ಅಕ್ರಮಕ್ಕೆ ಸಂಬಂಧಿಸಿದ ಯಾವುದೇ ದೂರನ್ನು ಇಲ್ಲಿ ದಾಖಲಿಸಬಹುದಾಗಿದೆ. ದೂರು ಅಥವಾ ಮಾಹಿತಿ ನೀಡಿದವರ ವಿವರವನ್ನು ಗೋಪ್ಯವಾಗಿ ಇಡಲಾಗುತ್ತದೆ. ಫೋಟೊ, ವಿಡಿಯೊ ಸಹ ಅಪ್‌ಲೋಡ್‌ ಮಾಡಬಹುದಾಗಿದೆ.

ಗೂಗಲ್‌ ಪ್ಲೇ ಸ್ಟೋರ್‌ನಲ್ಲಿ ಆ್ಯಪ್‌ ಲಭ್ಯವಿದ್ದು, ಡೌನ್‌ಲೋಡ್‌ ಮಾಡಿಕೊಂಡು,  ನಿಮ್ಮ ಊರಿನಲ್ಲಿ ಚುನಾವಣಾ ಕಣದಲ್ಲಿರುವ ಯಾವುದೇ ವ್ಯಕ್ತಿಗೆ ಅಥವಾ ಪಕ್ಷಕ್ಕೆ ಮತ ಹಾಕುವಂತೆ ಆಮಿಷ ಒಡ್ಡಿದರೆ, ಹಣ, ಉಡುಗೊರೆ, ಕೂಪನ್‌, ಮದ್ಯದ ಹಂಚಿಕೆ ಮಾಡಿದರೆ ಆ್ಯಪ್‌ ಮೂಲಕ ದೂರು ನೀಡಬಹುದಾಗಿದೆ.

ಆಮಿಷವಲ್ಲದೆ ಅನುಮತಿ ಪಡೆಯದೇ ಪೋಸ್ಟರ್ ಮತ್ತು ಬ್ಯಾನರ್‌ ಅಂಟಿಸುವುದು, ಧಾರ್ಮಿಕ ಅಥವಾ ಕೋಮು ಪ್ರಚೋದಿತ ಭಾಷಣ ಮಾಡಿದರೂ ದೂರು ಸಲ್ಲಿಸಬಹುದಾಗಿದೆ.

ಮತಗಟ್ಟೆಯ 200 ಮೀಟರ್ ಪ್ರದೇಶದಲ್ಲಿ ನಿಷೇಧವಿದ್ದರೂ ಪ್ರಚಾರ ಮಾಡುವುದು, ಮತದಾನದ ದಿನ ವಾಹನಗಳಲ್ಲಿ ಮತದಾರರನ್ನು ಕರೆತಂದರೆ, ಮತ ಹಾಕದಂತೆ ಒತ್ತಡ ಹಾಕಿದರೂ ಆ್ಯಪ್‌ನಲ್ಲಿ ಮಾಹಿತಿ ನೀಡಬಹುದಾಗಿದೆ.

ಸಿ–ವಿಜಿಲ್‌ನಲ್ಲಿ ದಾಖಲಾಗುವ ದೂರುಗಳನ್ನು ಪರಿಶೀಲಿಸಲು ಪ್ರತ್ಯೇಕ ಸಿಬ್ಬಂದಿ ನಿಯೋಜಿಸಲಾಗಿದೆ. ದೂರು ದಾಖಲಾದ ಕೂಡಲೇ ಪರಿಶೀಲಿಸಿ ದೂರು ನೀಡಿದ ಸಮೀಪದ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಫ್ಲೈಯಿಂಗ್ ಸ್ಕ್ವಾಡ್ ತಂಡಕ್ಕೆ ಪ್ರಕರಣದ ಸಂಪೂರ್ಣ ವಿವರ ರವಾನಿಸಲಾಗುತ್ತದೆ. ಕೂಡಲೇ ಅಧಿಕಾರಿಗಳ ತಂಡವು ಘಟನಾ ಸ್ಥಳಕ್ಕೆ ಭೇಟಿ ನೀಡಲಿದೆ. ಗರಿಷ್ಠ 100 ನಿಮಿಷಗಳ ಒಳಗೆ ದೂರು ಇತ್ಯರ್ಥ ಪಡಿಸಲಾಗುತ್ತದೆ.

ಸಿ– ವಿಜಿಲ್ ಆ್ಯಪ್ ಮೂಲಕ ದೂರು ಸಲ್ಲಿಸಲಾಗದಂತಹ ಬೇಸಿಕ್‌ ಮಾಡೆಲ್‌ ಮೊಬೈಲ್‌ ಬಳಸುವವರು ಉಚಿತ ಸಹಾಯವಾಣಿ ಸಂಖ್ಯೆ 1950ಕ್ಕೆ ಕರೆಮಾಡಿ ಮಾಹಿತಿ ನೀಡಬಹುದಾಗಿದೆ.

ಸಿ–ವಿಜಿಲ್‌ ಆ್ಪಪ್‌ ಮೂಲಕ ದೂರು ಬಂದ ಕೂಡಲೇ ಕ್ರಮಕೈಗೊಳ್ಳಲಾಗುವುದು. ಜನರೂ ಆಯೋಗದೊಂದಿಗೆ ಪಾರದರ್ಶಕ ಚುನಾವಣೆಗೆ ಕೈಜೋಡಿಸಬೇಕು
ಸಂತೋಷ ಜಗಲಾಸರ ಸಹಾಯಕ ಚುನಾವಣಾಧಿಕಾರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT