ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲಕೋಟೆ ಲೋಕಸಭಾ ಕ್ಷೇತ್ರ: ಅಭ್ಯರ್ಥಿಗಳ ಸಂಖ್ಯೆಯಲ್ಲಿ ಹೊಸ ದಾಖಲೆ

ಇಲ್ಲಿಯವರೆಗಿನ ಚುನಾವಣೆಯಲ್ಲಿ ಈ ಸಂಖ್ಯೆಯಲ್ಲಿ ಸ್ಪರ್ಧಿಸಿರಲಿಲ್ಲ
Published 23 ಏಪ್ರಿಲ್ 2024, 5:48 IST
Last Updated 23 ಏಪ್ರಿಲ್ 2024, 5:48 IST
ಅಕ್ಷರ ಗಾತ್ರ

ಬಾಗಲಕೋಟೆ: ಬಾಲಕೋಟೆ ಲೋಕಸಭಾ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣಾ ಕಣದಲ್ಲಿ ಅಂತಿಮವಾಗಿ 22 ಅಭ್ಯರ್ಥಿಗಳು ಉಳಿದಿದ್ದು, ಇಲ್ಲಿಯವರೆಗಿನ ಚುನಾವಣೆಗಳಿಗೆ ಹೋಲಿಸಿದರೆ, ಇದು ದಾಖಲೆಯ ಸಂಖ್ಯೆಯಾಗಿದೆ.

ಇಲ್ಲಿಯವರೆಗೆ ನಡೆದ 17 ಚುನಾವಣೆಗಳಲ್ಲಿ 2014ರಲ್ಲಿ ಸ್ಪರ್ಧಿಸಿದ್ದ 17 ಅಭ್ಯರ್ಥಿಗಳ ಸಂಖ್ಯೆಯೇ ದಾಖಲೆಯಾಗಿತ್ತು. ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಸ್ಪರ್ಧಿಸುವ ಮೂಲಕ ಹಿಂದಿನ ಚುನಾವಣೆಗಳಲ್ಲಿನ ಸ್ಪರ್ಧಿಗಳ ಸಂಖ್ಯೆಯ ದಾಖಲೆಯನ್ನು ಮುರಿದಿದ್ದಾರೆ.

1952 ರಿಂದ 1962ರವರೆಗೆ ನಡೆದ ಮೂರು ಚುನಾವಣೆಗಳಲ್ಲಿ ಇಬ್ಬರೇ ಅಭ್ಯರ್ಥಿಗಳು ಸ್ಪರ್ಧಿಸಿದ್ದರು. 1967ರ ಚುನಾವಣೆಯಲ್ಲಿ ಅವರ ಸಂಖ್ಯೆ ಮೂರಕ್ಕೆ ಏರಿತ್ತು. ಸ್ವಾತಂತ್ರ್ಯ ಹೋರಾಟ ಆರಂಭದ ದಿನಗಳಲ್ಲಿ ಚುನಾವಣೆಗೆ ಸ್ಪರ್ಧಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮುಖಂಡರು ಒಲವು ತೋರುತ್ತಿಲ್ಲ. ಒಮ್ಮತದಿಂದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಲಾಗುತ್ತಿತ್ತು.

1989ರವರೆಗಿನ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಮಾತ್ರ ಸ್ಪರ್ಧಿಸುತ್ತಿದ್ದರು. ಪಕ್ಷೇತರರಾಗಿ ಸ್ಪರ್ಧಿಸಲು ಯಾರೂ ಮುಂದಾಗುತ್ತಿರಲಿಲ್ಲ. 1991ರಲ್ಲಿ ನಡೆದ ಚುನಾವಣೆಯಲ್ಲಿ 16 ಅಭ್ಯರ್ಥಿಗಳು ಕಣದಲ್ಲಿದ್ದರು. ಪಕ್ಷದ ಅಭ್ಯರ್ಥಿಗಳನ್ನು ಹೊರತುಪಡಿಸಿ, ಹನ್ನೊಂದು ಪಕ್ಷೇತರ ಅಭ್ಯರ್ಥಿಗಳು ಕಣದಲ್ಲಿ ಸ್ಪರ್ಧಿಸಿದ್ದರು.

1996ರಲ್ಲಿ 14 ಅಭ್ಯರ್ಥಿಗಳು ಕಣದಲ್ಲಿದ್ದರೆ, 1998 ಹಾಗೂ 99ರಲ್ಲಿ ಒಂದರ ಹಿಂದೆ ಒಂದರಂತೆ ಚುನಾವಣೆ ನಡೆದಿದ್ದರಿಂದ ಎರಡೂ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಸಂಖ್ಯೆ ಐದನ್ನೂ ದಾಟಿರಲಿಲ್ಲ.

2009ರ ಚುನಾವಣೆಯಲ್ಲಿ 13 ಮಂದಿ ಇದ್ದರೆ, 2019ರಲ್ಲಿ ನಡೆದ ಚುನಾವಣೆಯಲ್ಲಿ 14 ಅಭ್ಯರ್ಥಿಗಳು ಕಣದಲ್ಲಿದ್ದರು. ಈ ಬಾರಿ 22 ಅಭ್ಯರ್ಥಿಗಳಿದ್ದಾರೆ.

ಎರಡು ಮತಯಂತ್ರಗಳು ಬೇಕು: 16ಕ್ಕಿಂತ ಹೆಚ್ಚಿನ ಅಭ್ಯರ್ಥಿಗಳಿದ್ದರೆ ಎರಡು ಮತಗಳು ಬೇಕಾಗುತ್ತವೆ. ಜೊತೆಗೆ ಕೊನೆಯಲ್ಲಿ ನೋಟಾವೂ ಇರುತ್ತದೆ. ಒಂದು ಮತಯಂತ್ರದಲ್ಲಿ 16 ಅಭ್ಯರ್ಥಿಗಳ ಹೆಸರು ಮಾತ್ರ ಸೇರಿಸಬಹುದಾಗಿದೆ. ಬಾಗಲಕೋಟೆ ಕ್ಷೇತ್ರದಲ್ಲಿ ಎರಡು ಮತಯಂತ್ರಗಳು ಬೇಕಾಗುತ್ತವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT