ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ ಲೋಕಸಭಾ ಕ್ಷೇತ್ರ: ಮತದಾನದಲ್ಲಿ ಪುರುಷರದ್ದೇ ಮೇಲುಗೈ

Published 9 ಮೇ 2024, 6:26 IST
Last Updated 9 ಮೇ 2024, 6:26 IST
ಅಕ್ಷರ ಗಾತ್ರ

ಬಾಗಲಕೋಟೆ: ಬಾಗಲಕೋಟೆ ಲೋಕಸಭಾ ಕ್ಷೇತ್ರದ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಬಾದಾಮಿ, ನರಗುಂದ ವಿಧಾನಸಭಾ ಕ್ಷೇತ್ರಗಳನ್ನು ಹೊರತುಪಡಿಸಿದರೆ, ಉಳಿದ ಆರು ಕ್ಷೇತ್ರಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಹೆಚ್ಚಿತ್ತು. ಆದರೆ, ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲಿ ಪುರುಷರೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿದ್ದಾರೆ.

ಕ್ಷೇತ್ರದ ವ್ಯಾಪ್ತಿಯಲ್ಲಿ 8,95,432 ಪುರುಷ ಮತದಾರರ ಪೈಕಿ 6,63,613 ಮಂದಿ ಮತ ಚಲಾಯಿಸಿದ್ದಾರೆ. ಮತದಾನದ ಪ್ರಮಾಣ ಶೇ74.11 ರಷ್ಟಾಗಿದೆ. 9,10,650 ಮಹಿಳಾ ಮತದಾರರ ಪೈಕಿ 6,48,679 ಮಂತಿ ಮತ ಚಲಾಯಿಸಿದ್ದಾರೆ. ಮತದಾನದ ಪ್ರಮಾಣ ಶೇ71.23 ರಷ್ಟಾಗಿದೆ. ಇಬ್ಬರ ಮತದಾನದ ಪ್ರಮಾಣವು 2019ರ ಚುನಾವಣೆಗಿಂತ ಈ ಬಾರಿ ಹೆಚ್ಚಿದೆ.

2019ರಲ್ಲಿ 6,19,701 ಪುರುಷರು ಮತ ಹಾಕಿದ್ದರು. ಕಳೆದ ಬಾರಿಗೆ ಹೋಲಿಸಿದರೆ ಈ ಬಾರಿ 43,912 ಪುರುಷರು ಹೆಚ್ಚಿನ ಸಂಖ್ಯೆಯಲ್ಲಿ ಮತ ಹಾಕಿದ್ದಾರೆ. ಕಳೆದ ಬಾರಿ 5,81,348 ಮಹಿಳೆಯರು ಮತ ಹಾಕಿದ್ದರು. ಈ ಬಾರಿ 67,331 ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿದ್ದಾರೆ.

ಕಳೆದ ಬಾರಿ ಒಟ್ಟು 12,01,054 ಮತದಾರರು ಹಕ್ಕು ಚಲಾಯಿಸಿದ್ದರೆ, ಈ ಬಾರಿ 13,12,319 ಮಂದಿ ಮತದಾರರು ಮತ ಚಲಾಯಿಸಿದ್ದಾರೆ. ಕಳೆದ ಬಾರಿ 17,00,547 ಮತದಾರರಿದ್ದರೆ, ಈ ಬಾರಿ 18,06,183 ಮತದಾರರಿದ್ದರು. ಕಳೆದ ಬಾರಿಗೆ ಹೋಲಿಸಿದರೆ, ಈ ಬಾರಿ 1,05,636 ಮತದಾರರ ಸಂಖ್ಯೆ ಹೆಚ್ಚಾಗಿತ್ತು.

ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಮಹಿಳೆಯರನ್ನೇ ಗುರಿಯಾಗಿಸಿಕೊಂಡು ನೀಡಿದ್ದರಿಂದ ಮಹಿಳೆಯರ ಮತದಾನ ಪ್ರಮಾಣದಲ್ಲಿ ಬಹಳ ಹೆಚ್ಚಳವಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ನಿರೀಕ್ಷಿತ ಪ್ರಮಾಣದಲ್ಲಿ ಆಗಿಲ್ಲ. ಚಲಾವಣೆಯಾದ ಮತಗಳಲ್ಲಿ ಎಷ್ಟು ಮಹಿಳೆಯರು ಗ್ಯಾರಂಟಿ ಯೋಜನೆಗಳನ್ನು ಬೆಂಬಲಿಸಿದ್ದಾರೆ ಎಂಬ ಕುತೂಹಲವಿದ್ದು, ಲೆಕ್ಕಾಚಾರ ಜೋರಾಗಿಯೇ ನಡೆದಿದೆ.

ಹೆಚ್ಚಳ: 2019ರ ಚುನಾವಣೆಗೆ ಹೋಲಿಸಿದರೆ ಎಲ್ಲ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನದ ಪ್ರಮಾಣ ಹೆಚ್ಚಿದೆ. ತೇರದಾಳ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾನವಾಗಿದ್ದರೆ, ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಕಡಿಮೆ ಮತದಾನವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT