ಮಹಾಲಿಂಗಪುರ: ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಮೇ 18ರಂದು 1,500 ದಿನ ಪೂರೈಸುತ್ತಿರುವ ಕಾರಣ ಅಂದು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲು ತಾಲ್ಲೂಕು ಹೋರಾಟ ಸಮಿತಿ ನಿರ್ಧರಿಸಿದೆ.

ಪಟ್ಟಣದ ಗೋಕಾಕ ರಸ್ತೆಯ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ತಾಲ್ಲೂಕು ಹೋರಾಟ ಸಮಿತಿ ವತಿಯಿಂದ ಭಾನುವಾರ ಹಮ್ಮಿಕೊಂಡ ಸಭೆಯಲ್ಲಿ ಸಮಿತಿ ಮುಖಂಡರು ಮಾತನಾಡಿ, ‘ಮೇ 18 ರಂದು ಸಂಜೆ 5ಕ್ಕೆ ಬಸವೇಶ್ವರ ವೃತ್ತದಿಂದ ಚನ್ನಮ್ಮ ವೃತ್ತದವರೆಗೆ ಪ್ರತಿಭಟನಾ ರ್ಯಾಲಿ ನಡೆಸಲಾಗುವುದು. ಮಾನವ ಸರಪಳಿ ನಿರ್ಮಿಸಿದ ನಂತರ ತಹಶೀಲ್ದಾರ್ಗೆ ಮನವಿ ಸಲ್ಲಿಸಲಾಗುವುದು’ ಎಂದರು.

ಸಮಿತಿ ಅಧ್ಯಕ್ಷ ಸಂಗಪ್ಪ ಹಲ್ಲಿ ಅಧ್ಯಕ್ಷತೆ ವಹಿಸಿದ್ದರು. ಗಂಗಾಧರ ಮೇಟಿ, ಅರ್ಜುನ ಹಲಗಿಗೌಡರ, ನಿಂಗಪ್ಪ ಬಾಳಿಕಾಯಿ, ಸಿದ್ದು ಶಿರೋಳ, ಹಣಮಂತ ಜಮಾದಾರ, ಶಿವಲಿಂಗ ಟಿರಕಿ, ರಾಜೇಂದ್ರ ಮಿರ್ಜಿ, ರಾಜು ತೇರದಾಳ, ವೀರೇಶ ಆಸಂಗಿ, ರಫೀಕ ಮಾಲದಾರ, ಸುಲ್ತಾನ ಐನಾಪುರ, ಮಹಾಲಿಂಗಪ್ಪ ಅವರಾದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260512-19-1995075163

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.