ಮಹಾಲಿಂಗಪುರ: ‘ತಾಲ್ಲೂಕು ಕೇಂದ್ರಕ್ಕೆ ಅಗತ್ಯವಿರುವ ಎಲ್ಲ ಸೌಲಭ್ಯಗಳನ್ನು ಹೊಂದಿರುವ ಮಹಾಲಿಂಗಪುರ ಪಟ್ಟಣವನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡಬೇಕೆಂಬ ಸಾರ್ವಜನಿಕರ ಬೇಡಿಕೆ ಸಮಯೋಚಿತ ಹಾಗೂ ನ್ಯಾಯಸಮ್ಮತವಾಗಿದೆ’ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಹೇಳಿದರು.

ಪಟ್ಟಣದ ಚನ್ನಮ್ಮ ವೃತ್ತದ ಬಳಿ ತಾಲ್ಲೂಕು ಹೋರಾಟ ಸಮಿತಿಯಿಂದ ತಾಲ್ಲೂಕು ಕೇಂದ್ರಕ್ಕೆ ಆಗ್ರಹಿಸಿ ನಡೆದಿರುವ ಅನಿರ್ದಿಷ್ಟಾವಧಿ ಹೋರಾಟದ 1464ನೇ ದಿನವಾದ ಭಾನುವಾರ ಹೋರಾಟ ವೇದಿಕೆಗೆ ಭೇಟಿ ನೀಡಿ ಮಾತನಾಡಿದರು.

‘ಮುಧೋಳ ತಾಲ್ಲೂಕಿನಲ್ಲಿ ಈ ಹಿಂದಿನ ಜನಸಂಖ್ಯೆ ಅವಲೋಕಿಸಿದರೆ ಈಗಿನ ಜನಸಂಖ್ಯೆ ದುಪ್ಪಟ್ಟಾಗಿದೆ. ಸಹಜವಾಗಿ ಜನರ ಕೆಲಸ, ಕಾರ್ಯಗಳು ಸಹ ವಿಳಂಬವಾಗುತ್ತಿದ್ದು, ಇದಕ್ಕೆ ಪರಿಹಾರಾರ್ಥವಾಗಿ ತಕ್ಷಣದಿಂದಲೇ ಅಧಿಕಾರ ವಿಕೇಂದ್ರೀಕರಣ ಆಗಬೇಕು’ ಎಂದರು.

ಗಂಗಾಧರ ಮೇಟಿ, ವೀರೇಶ ಆಸಂಗಿ, ಶಿವಲಿಂಗ ಟಿರಕಿ, ಬಂದು ಪಕಾಲಿ, ಸಿದ್ದು ಶಿರೋಳ, ರಫೀಕ್ ಮಾಲದಾರ, ಹಣಮಂತ ಜಮಾದಾರ, ಮೂಸಾ ಬೂದಿಹಾಳ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-19-1352905567

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.