ಮಹಾಲಿಂಗಪುರ: ಪಟ್ಟಣದ ಜವಳಿ ಬಜಾರ್ನಲ್ಲಿರುವ ಯಲ್ಲಮ್ಮದೇವಿ ಹಾಗೂ ಮಲ್ಲೆಮ್ಮದೇವಿ ದೇವಸ್ಥಾನದಲ್ಲಿ ಏ.23 ಹಾಗೂ ಏ.24 ರಂದು ಲಕ್ಷದೀಪೋತ್ಸವ, ಕಳಸಾರೋಹಣ, ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ದೇವಸ್ಥಾನದ ಆವರಣದಲ್ಲಿ ಶನಿವಾರ ಕಾರ್ಯಕ್ರಮದ ಪ್ರಚಾರ ಸಾಮಗ್ರಿ ಬಿಡುಗಡೆ ಮಾಡಿ ಮಾತನಾಡಿದ ಮುಖಂಡರು, ‘ಏ.23 ರಂದು ಎಪಿಎಂಸಿ ಗಣಪತಿ ದೇವಸ್ಥಾನದಿಂದ ಯಲ್ಲಮ್ಮದೇವಿ ದೇವಸ್ಥಾನದವರೆಗೆ ಸಕಲ ವಾದ್ಯಮೇಳದೊಂದಿಗೆ ಯಲ್ಲಮ್ಮದೇವಿ ಕಳಸ ಮತ್ತು ಮಲ್ಲೆಮ್ಮದೇವಿ ಮೂರ್ತಿಯ ಮೆರವಣಿಗೆ ನಡೆಯಲಿದೆ.

ಇದೇ ವೇಳೆ ಕುಂಭಮೇಳವನ್ನು ಮಹಾಲಿಂಗೇಶ್ವರ ಸ್ವಾಮೀಜಿ ಉದ್ಘಾಟಿಸುವರು. ಸಂಜೆ 7 ರಿಂದ ರಾತ್ರಿ 9 ಗಂಟೆವರೆಗೆ ಲಕ್ಷದೀಪೋತ್ಸವ ಜರುಗಲಿದೆ. ನಂತರ ಸಂಗೀತ ಕಾರ್ಯಕ್ರಮ ನಡೆಯಲಿದೆ’ ಎಂದರು.

‘ಏ.24 ರಂದು ಬೆಳಿಗ್ಗೆ 9 ಗಂಟೆಗೆ ಮಹಿಳೆಯರಿಗೆ ಉಡಿ ತುಂಬುವ ಕಾರ್ಯಕ್ರಮ, 9.45 ಗಂಟೆಗೆ ಮಲ್ಲೆಮ್ಮದೇವಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಯಲ್ಲಮ್ಮದೇವಿ ದೇವಸ್ಥಾನದ ಕಳಸಾರೋಹಣ ನಡೆಯಲಿದೆ. ಬೆಳಿಗ್ಗೆ 10 ಗಂಟೆಗೆ ನಡೆಯಲಿರುವ ಧರ್ಮಸಭೆಯ ಸಾನ್ನಿಧ್ಯವನ್ನು ನಿರುಪಾದೀಶ್ವರ ಸ್ವಾಮೀಜಿ, ಸಹಜಾನಂದ ಸ್ವಾಮೀಜಿ, ಪ್ರಭು ಸ್ವಾಮೀಜಿ, ಗುರುಸಿದ್ಧೇಶ್ವರ ಸ್ವಾಮೀಜಿ, ಸಿದ್ರಾಮಯ್ಯ ಸ್ವಾಮೀಜಿ ವಹಿಸುವರು. ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಸಿದ್ದು ಸವದಿ, ವಿಧಾನ ಪರಿಷತ್ ಸದಸ್ಯೆ ಉಮಾಶ್ರೀ, ಸಿದ್ದು ಕೊಣ್ಣೂರ ಪಾಲ್ಗೊಳ್ಳುವರು’ ಎಂದು ತಿಳಿಸಿದರು.

ರವಿಗೌಡ ಪಾಟೀಲ, ಬಿ.ಡಿ.ಸೋರಗಾಂವಿ, ಮಹಾಂತೇಶ ಹಿಟ್ಟಿನಮಠ, ಎಂ.ಎಸ್.ಮುಗಳಖೋಡ, ಮಹಾಲಿಂಗಪ್ಪ ಲಾತೂರ, ಅಲ್ಲಪ್ಪ ಗುಂಜಿಗಾಂವಿ, ಶ್ರೀಶೈಲಗೌಡ ಪಾಟೀಲ, ಹಣಮಂತ ಬಡಿಗೇರ, ಈಶ್ವರ ಮುರಗೋಡ, ಈರಪ್ಪ ಚುನಮರಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-19-795243120

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.