ಮಹಾಲಿಂಗಪುರ: ಪಟ್ಟಣದ ವ್ಯಾಪ್ತಿಯಲ್ಲಿ ವೇಗಮಿತಿ ನಾಮಫಲಕ ಅಳವಡಿಸಬೇಕೆಂದು ಆಗ್ರಹಿಸಿ ಪುರಸಭೆ ಮಾಜಿ ಅಧ್ಯಕ್ಷ ಜಿ.ಎಸ್. ಗೊಂಬಿ ಅವರು ಪಿಎಸ್ಐ ಕಿರಣ ಸತ್ತಿಗೇರಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.

‘ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ಪಟ್ಟಣವು ಜನದಟ್ಟನೆಯಿಂದ ತುಂಬಿರುತ್ತದೆ. ಪಟ್ಟಣದೊಳಗೆ ರಸ್ತೆ ತೀರಾ ಇಕ್ಕಟ್ಟು ಇದೆ. ಚನ್ನಮ್ಮ ವೃತ್ತ, ಬಸವೇಶ್ವರ ವೃತ್ತ, ಎಪಿಎಂಸಿ ರಸ್ತೆ, ಮುಧೋಳ, ಗೋಕಾಕ ರಸ್ತೆ ಮಾರ್ಗಕ್ಕೆ ಸುರಕ್ಷತೆಯೇ ಇಲ್ಲದಂತಾಗಿದೆ. ಸವಾರರು ಪಟ್ಟಣದೊಳಗೆ 100 ಕಿ.ಮೀ. ವೇಗವಾಗಿ ವಾಹನ ಚಲಾಯಿಸುತ್ತಿದ್ದು, ಅಪಘಾತಕ್ಕೆ ಕಾರಣವಾಗುತ್ತಿವೆ’ ಎಂದು ಮನವಿಯಲ್ಲಿ ತಿಳಿಸಲಾಗಿದೆ.

‘ಪಟ್ಟಣದ ಪ್ರಮುಖ ವೃತ್ತವಾದ ಬಸವೇಶ್ವರ ವೃತ್ತದಲ್ಲಂತೂ ಪ್ರತಿದಿನ ಸಾವಿರಾರು ವಿದ್ಯಾರ್ಥಿಗಳು ಸಂಚರಿಸುತ್ತಾರೆ. ಈ ವೃತ್ತಕ್ಕೆ ಅಂಟಿಕೊಂಡು ಬ್ಯಾಂಕಗಳು, ಹೋಟೆಲ್ ಇನ್ನಿತರ ಅಂಗಡಿಗಳಿವೆ. ಸವಾರರು ಬೇಕಾಬಿಟ್ಟಿಯಾಗಿ ವಾಹನ ಚಲಾಯಿಸುತ್ತಿದ್ದು, ಪಾದಚಾರಿಗಳಿಗೆ ಸುರಕ್ಷತೆ ಮರೀಚಿಕೆಯಾಗಿದೆ. ಹೀಗಾಗಿ ಕೂಡಲೇ ರಸ್ತೆಗಳಿಗೆ ವೇಗಮಿತಿ ನಾಮಫಲಕಅಳವಡಿಸಬೇಕು’ ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-19-1988104407

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.