ರಬಕವಿ ಬನಹಟ್ಟಿ: ಸಮೀಪದ ಕೃಷ್ಣಾ ನದಿ ಮಧ್ಯ ಭಾಗದಲ್ಲಿಯ ಪಿಲ್ಲರ್ ನಂ. 7 ಮತ್ತು 8 ರ ಕಾಮಗಾರಿಯನ್ನು ಎರಡು ಮೂರು ದಿನಗಳಲ್ಲಿ ಮುಕ್ತಾಯಗೊಳಿಸುವಂತೆ ಜಮಖಂಡಿ ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ಸ್ಥಳದಲ್ಲಿದ್ದ ಗುತ್ತಿಗೆದಾರರಿಗೆ ಮತ್ತು ಎಂಜಿನಿಯರ್ಗೆ ತಿಳಿಸಿದರು.

ಅವರು ಶುಕ್ರವಾರ ಸಮೀಪದ ಕೃಷ್ಣಾ ನದಿಗೆ ನಿರ್ಮಾಣ ಮಾಡುತ್ತಿರುವ ಮಹೀಷವಾಡಗಿ ಸೇತುವೆ ಕಾಮಗಾರಿಯನ್ನು ವೀಕ್ಷಣೆ ಮಾಡಿ ಮಾತನಾಡಿದರು.

ಕೆಲವೇ ದಿನಗಳಲ್ಲಿ ಮಳೆಗಾಲ ಆರಂಭವಾಗುತ್ತದೆ ಮತ್ತು ರಾಜಾಪುರ ಜಲಾಶಯದಿಂದಲೂ ನೀರು ಬಿಡುವ ಸಾಧ್ಯತೆ ಇರುವುದರಿಂದ ನದಿ ಮಧ್ಯದಲ್ಲಿಯ ಪಿಲ್ಲರ್ಗಳ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸುವಂತೆ ತಿಳಿಸಿದರು.

ಕಳೆದ ಹತ್ತು ವರ್ಷಗಳಿಂದ ಸೇತುವೆ ಕಾಮಗಾರಿ ನನೆಗುದಿಗೆ ಬಿದ್ದಿತ್ತು. ಈಗ ಸಾರ್ವಜನಿಕರ ಬೆಂಬಲ ಮತ್ತು ಹೆಚ್ಚಿನ ಅನುದಾನ ಬಿಡುಗಡೆಯಾಗಿದ್ದರಿಂದ ಕಾಮಗಾರಿಯು ತೀವ್ರತೆ ಪಡೆದುಕೊಂಡಿದೆ ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ್ ತಿಳಿಸಿದರು.

ರಬಕವಿ ಬನಹಟ್ಟಿ ತಹಶೀಲ್ದಾರ್ ಗಿರೀಶ ಸ್ವಾದಿ ಮತ್ತು ಕಂದಾಯ ನಿರೀಕ್ಷಕ ಪ್ರಕಾಶ ಮಠಪತಿ ಹಾಗೂ ಎಂಜಿನಿಯರ್ಗಳು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-19-1748304703

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.