ಕೆರೂರ: ಜಮೀನಿನಲ್ಲಿ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳಿಗ್ಗೆ ಸಮೀಪದ ತಪಸಕಟ್ಟಿ ಗ್ರಾಮದಲ್ಲಿ ನಡೆದಿದೆ.
ದ್ಯಾಮನ್ನ ಮಲ್ಲಪ್ಪ ಹೊಸೂರ (29) ಮೃತಪಟ್ಟವರು. ಮಂಗಳವಾರ ಬೆಳಿಗ್ಗೆ ತಮ್ಮ ಜಮೀನಿಗೆ ನೀರು ಹಾಯಿಸಲು ಹೋದಾಗ ಜಮೀನಿನಲ್ಲಿ ಅಳವಡಿಸಿದ್ದ ಮೋಟರ್ ಚಾಲು ಮಾಡಲು ಹೋದಾಗ ಎಡಗೈಗೆ ವಿದ್ಯುತ್ ಸ್ಪರ್ಶವಾಗಿದೆ.