ಭಾನುವಾರ, ಜುಲೈ 3, 2022
24 °C

ಮ್ಯಾಕ್ಸಿಕ್ಯಾಬ್‌ಗೆ ಬೆಂಕಿ: ಇಬ್ಬರು ಸಜೀವ ದಹನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಾಗಲಕೋಟೆ: ಮ್ಯಾಕ್ಸಿಕ್ಯಾಬ್ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದ ಪರಿಣಾಮ ಬೆಂಕಿ ಹೊತ್ತಿಕೊಂಡು ಇಬ್ಬರು ಸಜೀವ ದಹನಗೊಂಡ ದಾರುಣ ಘಟನೆ ಮುಧೋಳ ತಾಲ್ಲೂಕಿನ ಜಾಲಿಬೇರ ಬಳಿ ಬುಧವಾರ ರಾತ್ರಿ ನಡೆದಿದೆ.

ಬೆಳಗಾವಿ ಜಿಲ್ಲೆ ಅಥಣಿ ತಾಲ್ಲೂಕಿನ ಚಮಕೇರಿಯಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಪಾಲ್ಗೊಂಡು ಮುಧೋಳದ ಗಾಣಿಗೇರ ಕುಟುಂಬದವರು ವಾಪಸ್ ಬರುವಾಗ ಅಪಘಾತ ನಡೆದಿದೆ.

ಬೇರೊಂದು ವಾಹನ ಹಿಂದಕ್ಕೆ ಹಾಕುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕ್ಯಾಬ್ ರಸ್ತೆ ಪಕ್ಕದ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಈ ವೇಳೆ ತಂತಿಯಿಂದ ಹಾರಿದ ಕಿಡಿ ಕ್ಯಾಬ್‌ಗೆ ತಗುಲಿ ಬೆಂಕಿ ಹೊತ್ತಿದೆ. ಚಾಲಕ ಸೇರಿದಂತೆ ವಾಹನದ ಒಳಗೆ ಇದ್ದವರು ಹೊರಗೆ ಜಿಗಿದು ಪ್ರಾಣ ಕಾಪಾಡಿಕೊಂಡಿದ್ದಾರೆ. ಹೊರ ಬರಲು ಸಾಧ್ಯವಾಗದೇ ಮುಧೋಳದ ವೃದ್ಧೆ ಈರವ್ವ ಗಾಣಿಗೇರ (70) ಹಾಗೂ ಅನ್ನಕ್ಕ ಗಾಣಿಗೇರ (58) ಜೀವಂತವಾಗಿ ದಹಿಸಿ ಹೋಗಿದ್ದಾರೆ.

ಮ್ಯಾಕ್ಸಿಕ್ಯಾಬ್‌ನಲ್ಲಿ 20ಕ್ಕೂ ಹೆಚ್ಚು ಜನರಿದ್ದು, ಅಪಘಾತದಲ್ಲಿ ಗಾಯಗೊಂಡ 11 ಮಂದಿಯನ್ನು ಮುಧೋಳದ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಲೋಕಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು