ಬಾಗಲಕೋಟೆ: ಜಿಲ್ಲಾ ಹಾಗೂ ಅಧೀನ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜಿಲ್ಲೆಯಾದ್ಯಂತ ರಾಷ್ಟ್ರಕ್ಕಾಗಿ 2ನೇ ಮಧ್ಯಸ್ಥಿಕೆಯ ವಿಶೇಷ ಅಭಿಯಾನ ಪ್ರಾರಂಭಿಸಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಎನ್.ವಿ.ವಿಜಯ್ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಈ ಅಭಿಯಾನದಲ್ಲಿ ಬಾಕಿ ಇರುವ ಪ್ರಕರಣಗಳಾದ ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಮೋಟಾರು ಅಪಘಾತ, ಚೆಕ್ ಅಮಾನ್ಯ ಪ್ರಕರಣಗಳು, ವಾಣಿಜ್ಯ, ಸೇವಾ ಪ್ರಕರಣಗಳು, ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕರ ವ್ಯಾಜ್ಯ ಪ್ರಕರಣಗಳು ಡಿಆರ್ಟಿ, ಪಾಲುದಾರಿಕೆ, ಭೂಸ್ವಾಧೀನ ಪ್ರಕರಣಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ಮಧ್ಯಸ್ಥಿಕೆ ಮೂಲಕ ಇತ್ಯರ್ಥಪಡಿಸಲಾಗುತ್ತದೆ ಎಂದಿದ್ದಾರೆ.

ನ್ಯಾಯಾಲಯದ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ಸೂಚಿಸಿಕೊಂಡಲ್ಲಿ ಅಂತಹ ಪ್ರಕರಣಗಳಲ್ಲಿ ಉಭಯ ಪಕ್ಷಗಾರರನ್ನು ಕರೆದುಕೊಂಡು ಜಿಲ್ಲಾ ನ್ಯಾಯಾಲಯದ ಸಮುಚ್ಛಯದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ನ್ಯಾಯಾಲಯಗಳ ಆವರಣಗಳಲ್ಲಿರುವ ಮಧ್ಯಸ್ಥಿಕೆ ಕೇಂದ್ರಗಳಲ್ಲಿ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದಾಗಿದೆ ಎಂದು ತಿಳಿಸಿದ್ದಾರೆ.

24 ರಂದು ವಿಶೇಷ ಲೋಕ ಅದಾಲತ್: ನ್ಯಾಯಾಲಯಗಳಲ್ಲಿ ಬಾಕಿ ಇರುವ ಭೂಸ್ವಾಧೀನ ಪ್ರಕರಣ ಮತ್ತು ಭೂಸ್ವಾಧೀನ ದರಕಾಸ್ತು ಪ್ರಕರಣಗಳಿಗೆ ಸಂಬಂಧಿಸಿದಂತೆ ಜ.24ರಂದು ವಿಶೇಷ ಲೋಕ ಅದಾಲತ್ ಶಿಬಿರ ಹಮ್ಮಿಕೊಳ್ಳಲಾಗಿದೆ.

ಶಿಬಿರದಲ್ಲಿ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿರುವ ಮತ್ತು ಇತ್ಯರ್ಥವಾಗಿ ದರಕಾಸ್ತು ಹಂತದಲ್ಲಿರುವ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಲಾಗುತ್ತದೆ. ಇದರ ಸದುಪಯೋಗವನ್ನು ಕಕ್ಷಿದಾರರು ಪಡೆದುಕೊಳ್ಳಬಹುದಾಗಿದೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.