ಮಂಗಳವಾರ, 28 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಸಮಾವೇಶ: ‍ಪೂರ್ವಭಾವಿ ಸಭೆ

Published 13 ಏಪ್ರಿಲ್ 2024, 14:02 IST
Last Updated 13 ಏಪ್ರಿಲ್ 2024, 14:02 IST
ಅಕ್ಷರ ಗಾತ್ರ

ಬಾದಾಮಿ: ಬಾಗಲಕೋಟೆ ಲೋಕಸಭೆ ಮತಕ್ಷೇತ್ರದ ಚುನಾವಣೆ ಅಂಗವಾಗಿ ಇಲ್ಲಿನ ಹೊಸಗೌಡ್ರ ಕಲ್ಯಾಣ ಮಂಟಪದಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗದ ಸ್ವಾಭಿಮಾನಿ ಕಾಂಗ್ರೆಸ್ ಪಕ್ಷದ ಮುಖಂಡರ ಮತ್ತು ಕಾರ್ಯಕರ್ತರ ಪೂರ್ವಭಾವಿ ಸಭೆ ಶುಕ್ರವಾರ ನಡೆಯಿತು.

ಕಾಂಗ್ರೆಸ್ ಮುಖಂಡ ಹೊಳೆಬಸು ಶೆಟ್ಟರ ಮಾತನಾಡಿ, ಸಿದ್ದರಾಮಯ್ಯ ಅಭಿಮಾನಿ ಬಳಗದ ಸ್ವಾಭಿಮಾನಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆಯನ್ನು ಮೂರು ನಾಲ್ಕು ದಿನಗಳಲ್ಲಿ ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸಚಿವ ಶಿವಾನಂದ ಪಾಟೀಲ, ಬಾಗಲಕೋಟೆ ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಂಯುಕ್ತಾ ಪಾಟೀಲ, ಜಿಲ್ಲೆಯ ಸಚಿವರು ಮತ್ತು ಶಾಸಕರನ್ನು ಆಹ್ವಾನಿಸಲಾಗುವುದು ಎಂದರು.

ಬಾದಾಮಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಗೌಡ ಯಕ್ಕಪ್ಪನವರ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಹೇಶ ಹೊಸಗೌಡ್ರ, ಪಿ.ಆರ್. ಗೌಡರ, ಎಂ.ಬಿ. ಹಂಗರಗಿ, ಎಂ.ಡಿ. ಯಲಿಗಾರ, ಆರ್.ಎಫ್. ಬಾಗವಾನ, ಹನುಮಂತ ದೇವರಮನಿ, ನಾಗಪ್ಪ ಅಡಪಟ್ಟಿ, ಶಶಿ ಉದಗಟ್ಟಿ, ಬಸನಗೌಡ ಹದ್ಲಿ, ಎಸ್.ಎ. ನೀರಲಗಿ, ಬಸವರಾಜ ಬ್ಯಾಹಟ್ಟಿ ಮೊದಲಾದ ಮುಖಂಡರು ಮತ್ತು ಕಾರ್ಯಕರ್ತರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT