ಸೋಮವಾರ, ಆಗಸ್ಟ್ 8, 2022
24 °C

ರಬಕವಿ ಬನಹಟ್ಟಿ: ಲಸಿಕೆ ಪ್ರತ್ಯೇಕ ಹಂಚಿಕೆ ಮಾಡಿ-ಶಾಸಕ ಸಿದ್ದು ಸವದಿ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಬಕವಿ ಬನಹಟ್ಟಿ: ರಬಕವಿ ಬನಹಟ್ಟಿ ತಾಲ್ಲೂಕಿಗೆ ಪ್ರತ್ಯೇಕವಾಗಿ ಲಸಿಕೆಯನ್ನು ಹಂಚಿಕೆ ಮಾಡಬೇಕು. ಇದರಿಂದ ಈ ಭಾಗದ ಜನರಿಗೆ ಬಹಳಷ್ಟು ಅನುಕೂಲವಾಗಲಿದೆ. ಬಾಗಲಕೋಟೆ, ಬಾದಾಮಿ ಮತ್ತು ಹುನಗುಂದ ಕ್ಷೇತ್ರಗಳನ್ನು ಗಮನಿಸಿದರೆ ರಬಕವಿ ಬನಹಟ್ಟಿ ತಾಲ್ಲೂಕಿಗೆ ಕಡಿಮೆ ಲಸಿಕೆಯನ್ನು ವಿತರಣೆ ಮಾಡಲಾಗುತ್ತಿದೆ. ಆದ್ದರಿಂದ ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಿಗೆ ಲಸಿಕೆಯನ್ನು ನೀಡಬೇಕು ಎಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಶಾಸಕ ಸಿದ್ದು ಸವದಿ ಆಗ್ರಹಿಸಿದರು.

ಎಸ್‍ಆರ್‌ಎ ಮೈದಾನದಲ್ಲಿ ನಡೆಯುತ್ತಿರುವ ಲಸಿಕಾ ಕೇಂದ್ರಕ್ಕೆ ಶನಿವಾರ ಭೇಟಿ ನೀಡಿ ಜಿಲ್ಲಾ ಆರೋಗ್ಯಾಧಿಕಾರಿ ಜೊತೆಗೆ ದೂರವಾಣಿಯಲ್ಲಿ ಮಾತನಾಡಿದರು.

ಇದೇ 21 ರಂದು ಕ್ಷೇತ್ರದ ವ್ಯಾಪ್ತಿಯಲ್ಲಿ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗುವುದು. ಈ ನಿಮಿತ್ತವಾಗಿ ಸ್ಥಳೀಯ ಎಸ್ಆರ್‌ಎ ಮೈದಾನದ ಜೊತೆಗೆ ಅವಳಿ ನಗರದಲ್ಲಿ ನಾಲ್ಕೈದು ಕೇಂದ್ರಗಳನ್ನು ಸ್ಥಾಪಿಸಿ ಜನರಿಗೆ ಲಸಿಕೆಯನ್ನು ನೀಡಲಾಗುವುದು. ಇದೇ ಕಾರ್ಯವನ್ನು ಕ್ಷೇತ್ರದ ಮಹಾಲಿಂಗಪುರ, ಹೊಸೂರ ಹಾಗೂ ರಾಮಪುರದಲ್ಲಿ ಹಮ್ಮಿಕೊಳ್ಳಲಾಗುವುದು ಎಂದರು.

ಶನಿವಾರ ಕ್ಷೇತ್ರಕ್ಕೆ 18 ವರ್ಷ ಮೇಲ್ಪಟ್ಟವರಿಗಾಗಿ 750 ಹಾಗೂ 45 ವರ್ಷ ಮೇಲ್ಪಟ್ಟವರಿಗಾಗಿ 450 ಡೋಸ್‍ ಲಸಿಕೆ ಬಂದಿದೆ. 18 ವರ್ಷ ಮೇಲ್ಪಟ್ಟವರು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದಾರೆ. ಲಸಿಕೆ ಹೆಚ್ಚಿನ ಪ್ರಮಾಣದಲ್ಲಿ ಬಂದರೆ ವಾರ್ಡ್‍ಗಳಲ್ಲಿ ಲಸಿಕಾ ಕೇಂದ್ರವನ್ನು ಸ್ಥಾಪಿಸಲಾಗುವುದು. ಗ್ರಾಮೀಣ ಪ್ರದೇಶದ ಜನರು ಲಸಿಕೆ ಪಡೆದುಕೊಳ್ಳಲು ಬರುತ್ತಿಲ್ಲ. ಈ ನಿಟ್ಟಿನಲ್ಲಿ ಇನ್ನಷ್ಟು ಜಾಗೃತಿ ಅಗತ್ಯವಾಗಿದೆ ಎಂದು ಸವದಿ ತಿಳಿಸಿದರು.

ತಹಶೀಲ್ದಾರ್ ಸಂಜಯ ಇಂಗಳೆ, ಟಿಎಚ್‌ಒ ಡಾ.ಜಿ.ಎಚ್.ಗಲಗಲಿ, ಸಿಪಿಐ ಜಿ.ಕರುಣೇಶಗೌಡ, ಸಹಾಯಕ ಆರೋಗ್ಯಾಧಿಕಾರಿ ಅಪ್ಪಾಜಿ ಹೂಗಾರ, ಕಂದಾಯ ನಿರೀಕ್ಷಕ ಬಸವರಾಜ ತಾಳಿಕೋಟಿ, ನಗರಸಭೆಯ ಅಧ್ಯಕ್ಷ ಶ್ರೀಶೈಲ ಬೀಳಗಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು