ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾನಿಗೀಡಾದ ಮನೆಗಳಿಗೆ ಶಾಸಕ ಸವದಿ ಭೇಟಿ

Published 2 ಜೂನ್ 2023, 13:58 IST
Last Updated 2 ಜೂನ್ 2023, 13:58 IST
ಅಕ್ಷರ ಗಾತ್ರ

ಮಹಾಲಿಂಗಪುರ: ಪಟ್ಟಣದಲ್ಲಿ ಗುರುವಾರ ಸಂಜೆ ಸುರಿದ ಮಳೆಗೆ ಹಾನಿಗೀಡಾದ ಕೆಂಗೇರಿಮಡ್ಡಿಯ ಮನೆಗಳಿಗೆ ಶಾಸಕ ಸಿದ್ದು ಸವದಿ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಮಹಾದೇವ ಸಾವಂತ, ಗೌರವ್ವ ಕೈಸೋಲಗಿ, ಶಾರವ್ವ ಶಿರೋಳ, ಚನ್ನಪ್ಪ ಪಾತ್ರೋಟ, ಪರಶುರಾಮ ವಾಲಿಕಾರ, ಅಮೀತ ಕಲಾಲ, ಕೃಷ್ಣಾ ಲಕ್ಷ್ಮೇಶ್ವರ, ಸಂಗೀತಾ ನಿಗಡೆ ಅವರ ಮನೆಗಳಿಗೆ ಭೇಟಿ ನೀಡಿ ಹಾನಿ ಕುರಿತು ಶಾಸಕರು ಮಾಹಿತಿ ಪಡೆದರು.

ಹಾನಿಗೀಡಾದ ಮನೆಗಳ ಸಮೀಕ್ಷೆ ನಡೆಸುವಂತೆ ತಹಶೀಲ್ದಾರ್ ಡಾ.ದೊಡ್ಡಪ್ಪ ಹೂಗಾರ ಅವರಿಗೆ ಸೂಚನೆ ನೀಡಿದ ಶಾಸಕರು, ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು.

ಪುರಸಭೆ ಮುಖ್ಯಾಧಿಕಾರಿ ಜಗದೀಶ್ ಈಟಿ, ಗ್ರಾಮ ಲೆಕ್ಕಾಧಿಕಾರಿ ಅವಿನಾಶ ಕಾಂಬಳೆ, ಪುರಸಭೆ ಸದಸ್ಯ ಶೇಖರ ಅಂಗಡಿ, ಮುಖಂಡ ಚನ್ನಪ್ಪ ರಾಮೋಜಿ ಇತರರು ಇದ್ದರು.

ಮಹಾಲಿಂಗಪುರದ ಕೆಂಗೇರಿಮಡ್ಡಿಯಲ್ಲಿ ಮಳೆಯಿಂದ ಹಾನಿಗೀಡಾದ ಮನೆಗಳಿಗೆ ಶಾಸಕ ಸಿದ್ದು ಸವದಿ ಭೇಟಿ ನೀಡಿ ಪರಿಶೀಲಿಸಿದರು
ಮಹಾಲಿಂಗಪುರದ ಕೆಂಗೇರಿಮಡ್ಡಿಯಲ್ಲಿ ಮಳೆಯಿಂದ ಹಾನಿಗೀಡಾದ ಮನೆಗಳಿಗೆ ಶಾಸಕ ಸಿದ್ದು ಸವದಿ ಭೇಟಿ ನೀಡಿ ಪರಿಶೀಲಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT