ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೋತಿ ಕಚ್ಚಿ 8 ಮಂದಿಗೆ ಗಾಯ

Published 10 ಜುಲೈ 2024, 14:43 IST
Last Updated 10 ಜುಲೈ 2024, 14:43 IST
ಅಕ್ಷರ ಗಾತ್ರ

ಬಾದಾಮಿ: ಬನಶಂಕರಿ ರಸ್ತೆಯ ಕಾಳಿದಾಸ ಶಿಕ್ಷಣ ಸಂಸ್ಥೆಯ ಸಮೀಪ ಮಂಗಳವಾರ ಸಂಜೆ ಕಪ್ಪು ಕೋತಿಯೊಂದು ಮಹಿಳೆಯರು ಸೇರಿದಂತೆ ಎಂಟಕ್ಕೂ ಹೆಚ್ಚು ಜನರಿಗೆ ಕಚ್ಚಿ ಗಾಯಗೊಳಿಸಿದೆ ಎಂದು  ಗಾಯಗೊಂಡ ಮಹಾದೇವ ಪತ್ರಿಕೆಗೆ ಹೇಳಿದರು.

ಅರಣ್ಯ ಇಲಾಖೆ ಸಿಬ್ಬಂದಿ ಕೋತಿಯನ್ನು ಹಿಡಿದು ಬೇರೆಡೆ ಸಾಗಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ಕೋತಿ ನೆಗೆದಾಡುತ್ತ ಜನರ ತಲೆ, ಕಾಲು, ಬೆನ್ನು ಮತ್ತು ಕೈಗೆ ಕಚ್ಚಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದರು. ಗಾಯಗೊಂಡವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದರು.

ಪ್ರಾದೇಶಿಕ ವಲಯ ಅರಣ್ಯ ಇಲಾಖೆ ಅಧಿಕಾರಿ ವೀರೇಶ ಅವರನ್ನು ಪತ್ರಿಕೆ ಸಂಪರ್ಕಿಸಿದಾಗ ಕೋತಿಯನ್ನು ಹಿಡಿದು ಬೇರೆ ಕಡೆ ಸಾಗಿಸುವುದಾಗಿ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT