ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾಲಿಂಗಪುರ: ಮೊರಾರ್ಜಿ ಶಾಲೆಯ ಏಳು ವಿದ್ಯಾರ್ಥಿಗಳಿಗೆ ಕೋವಿಡ್ ದೃಢ

Last Updated 2 ಏಪ್ರಿಲ್ 2021, 9:44 IST
ಅಕ್ಷರ ಗಾತ್ರ

ಬಾಗಲಕೋಟೆ: ಮುಧೋಳ ತಾಲ್ಲೂಕಿನ ಮಹಾಲಿಂಗಪುರದ ಮೊರಾರ್ಜಿ ದೇಸಾಯಿ ವಸತಿ ಪ್ರೌಢಶಾಲೆಯ ಏಳು ಮಂದಿ ವಿದ್ಯಾರ್ಥಿಗಳಿಗೆ ಕೋವಿಡ್–19 ಸೋಂಕು ದೃಢಪಟ್ಟಿದೆ.

ಮಹಾಲಿಂಗಪುರದ ಡಬಲ್ ರಸ್ತೆಯಲ್ಲಿರುವ ಈ ಶಾಲೆಯಲ್ಲಿ 130 ವಿದ್ಯಾರ್ಥಿಗಳು, 10 ಮಂದಿ ಶಿಕ್ಷಕರು ಹಾಗೂ ಆರು ಮಂದಿ ಶಿಕ್ಷಕೇತರ ಸಿಬ್ಬಂದಿ ಇದ್ದಾರೆ. ಅವರಲ್ಲಿ 115 ವಿದ್ಯಾರ್ಥಿಗಳು ಶಾಲೆಗೆ ಹಾಜರಾಗಿದ್ದು, ಮಾರ್ಚ್ 27ರಂದು ಎಲ್ಲರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿತ್ತು. ಶುಕ್ರವಾರ ಫಲಿತಾಂಶ ಬಂದಿದೆ. ಅವರಲ್ಲಿ ಐವರು ಬಾಲಕರು ಹಾಗೂ ಇಬ್ಬರು ಬಾಲಕಿಯರಿಗೆ ಕೋವಿಡ್ ಪಾಸಿಟಿವ್ ಬಂದಿದೆ. ಮಕ್ಕಳ ಎಲ್ಲರ ಆರೋಗ್ಯವೂ ಸ್ಥಿರವಾಗಿದೆ. ಯಾರಿಗೂ ಕೋವಿಡ್ ಲಕ್ಷಣಗಳು ಇಲ್ಲ ಎಂದು ತಿಳಿದುಬಂದಿದೆ.

ಸೋಂಕಿಗೆ ತುತ್ತಾದ ವಿದ್ಯಾರ್ಥಿಗಳನ್ನು ಶಾಲೆಯಲ್ಲಿಯೇ ಕ್ವಾರಂಟೈನ್ ಮಾಡಲಾಗಿದೆ. ಅವರ ಕುಟುಂಬದವರನ್ನು ಕೋವಿಡ್ ತಪಾಸಣೆಗೆ ಒಳಪಡಿಸಲಾಗಿದೆ. ಶಾಲೆಯನ್ನು ಕಂಟೈನ್‌ಮೆಂಟ್ ವಲಯ ಎಂದು ಘೋಷಿಸಲಾಗಿದೆ. ಕೋವಿಡ್ ನೆಗೆಟಿವ್ ವರದಿ ಬಂದ ಮಕ್ಕಳನ್ನು ಪ್ರತ್ಯೇಕವಾಗಿ ಇಡಲಾಗಿದೆ. ಏಳು ದಿನಗಳ ನಂತರ ಅವರನ್ನು ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಅನಂತ ದೇಸಾಯಿ ‘ಪ್ರಜಾವಾಣಿ’ಗೆ ತಿಳಿಸಿದರು.

ಶಾಲೆಗೆ ಆರೋಗ್ಯ ಇಲಾಖೆ ಮುಧೋಳ ತಾಲ್ಲೂಕು ಕೋವಿಡ್ ನೋಡಲ್ ಅಧಿಕಾರಿ ಡಾ.ಅರವಿಂದ ಪಟ್ಟಣಶೆಟ್ಟಿ, ಜಮಖಂಡಿ ಉಪವಿಭಾಗಾಧಿಕಾರಿ ಸಿದ್ದು ಹುಲ್ಲೊಳ್ಳಿ ಭೇಟಿ ನೀಡಿ ಮಕ್ಕಳಿಗೆ ಚಿಕಿತ್ಸೆ ವ್ಯವಸ್ಥೆ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT