ಮುಧೋಳ: ‘ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಹೆಚ್ಚು ದಿನ ಮುಂದುವರೆಯಲ್ಲ. ಕಾಂಗ್ರೆಸ್ ಶಾಸಕರು ಅನುದಾನಕ್ಕೆ ಬಂಡೇಳುವ ದಿನ ದೂರವಿಲ್ಲ’ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

‘ಮುಖ್ಯಮಂತ್ರಿ ಸ್ಥಾನಕ್ಕೆ ಐವರು ಟವೆಲ್ ಹಾಕಿದ್ದಾರೆ. ಪಕ್ಷದಲ್ಲಿ ತಮ್ಮ ವರ್ಚಸ್ಸು ಹೆಚ್ಚಿಸಿಕೊಳ್ಳಲು ಶಾಸಕರ ಖರೀದಿಗೆ ಬಿಡ್ ರೀತಿ ದರ ಏರಿಕೆ ಪೈಪೋಟಿ ನಡೆದಿದೆ. ₹50 ಕೋಟಿಯಿಂದ ₹100 ಕೋಟಿವರಗೆ ಅವರದ್ದೇ ಶಾಸಕರಿಗೆ ಆಮಿಷ ಒಡ್ಡಲಾಗುತ್ತಿದೆ. ಅದಕ್ಕೆ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಅವರನ್ನು ದೆಹಲಿಗೆ ಕರೆಯಿಸಿ ರಾಜೀನಾಮೆಗೆ ಸಿದ್ಧರಾಗಿರಿ ಎಂಬ ಸೂಚನೆ ಕಾಂಗ್ರೆಸ್ ಹೈಕಮಾಂಡ್ ನೀಡಿದೆ’ ಎಂದು ಅವರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

‘ಸಿದ್ದರಾಮಯ್ಯ ಅವರು ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಸರ್ಕಾರದ ಖಜಾನೆಯಲ್ಲಿ ಹಗಲು ದರೋಡೆ ನಡೆದಿದೆ. ಇದರಿಂದ ಹತಾಶರಾಗಿ ಅವರು ದ್ವೇಷ ರಾಜಕಾರಣ ಶುರು ಮಾಡಿದ್ದಾರೆ’ ಎಂದರು.

‘ಸರ್ಕಾರ ರಚನೆಯಾಗಿ ಒಂದೂವರೆ ವರ್ಷವಾದರೂ ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳು ನಡೆಯುತ್ತಿಲ್ಲ. ನಾವು ಮಾಡಿದ್ದ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಹಣ ನೀಡದೇ ಇರುವುದರಿಂದ ಅರ್ಧಕ್ಕೆ ಸ್ಥಗಿತಗೊಂಡಿವೆ. ಕಾಮಗಾರಿ ಮಾಡಿದ ಗುತ್ತಿಗೆದಾರರ ಹಣ ಬಿಡುಗಡೆಯಾಗದ ಕಾರಣ ತಮ್ಮ ಯಂತ್ರೋಪಕರಣಗಳನ್ನು ಮಾರಾಟ ಮಾಡಿ ಬಡ್ಡಿ ಕಟ್ಟುವ ಪರಿಸ್ಥಿತಿ ಬಂದಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.