ಮುಧೋಳ: ‘ಕಬ್ಬು ಬೆಳೆಗಾರರ ಬಾಕಿ ಹಣ ಪಾವತಿಗೆ ಆಗ್ರಹಿಸಿ ಶಾಂತಿಯುತವಾಗಿ ಹೋರಾಟ ಮಾಡುತ್ತಿರುವ ರೈತರ ಮೇಲೆ ಸರ್ಕಾರ ಮತ್ತು ಪೊಲೀಸ್ ಇಲಾಖೆ ವಿನಾಕಾರಣ 307ನಂತಹ ಗಂಭೀರ ಕಲಂಗಳ ಅಡಿ ಕೇಸ್ ದಾಖಲಿಸಿ ಜೈಲಿಗಟ್ಟುತ್ತಿರುವುದು ಖಂಡನೀಯ’ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವಂತ ಕಾಂಬಳೆ ಆಕ್ರೋಶ ವ್ಯಕ್ತಪಡಿಸಿದರು.

ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪೊಲೀಸ್ ಇಲಾಖೆಯ ವೈಫಲ್ಯ ಮುಚ್ಚಿಕೊಳ್ಳಲು ರೈತರ ಮೇಲೆ ಪ್ರಕರಣ ದಾಖಲು ಮಾಡಲಾಗಿದೆ ಎಂದರು.

‘2025-26ನೇ ಸಾಲಿನ ಕಬ್ಬಿನ ಬಾಕಿ ಹಣ ನೀಡುವಂತೆ ರೈತರು ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದಾರೆ. ಈ ಹಿಂದೆ ಎಸ್.ಪಿ. ಆಗಿದ್ದ ಅಮರ್ನಾಥ ರೆಡ್ಡಿ ಅವರು ರೈತರು ಮತ್ತು ಕಾರ್ಖಾನೆ ಮಾಲೀಕರ ನಡುವೆ ಸಂಧಾನ ನಡೆಸಿ ಸಮಸ್ಯೆ ಬಗೆಹರಿಸುತ್ತಿದ್ದರು. ಆದರೆ, ಈಗಿನ ಪೊಲೀಸ್ ವರಿಷ್ಠಾಧಿಕಾರಿ ಅವರು ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳದ ಕಾರಣ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಅಹಿತಕರ ಘಟನೆ ಸಂಭವಿಸಿದೆ. ರೈತರು ಹೊರಗಿದ್ದಾಗಲೇ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ರೈತರ ತಲೆಗೆ ಕಟ್ಟಲಾಗುತ್ತಿದೆ’ ಎಂದು ಕಾಂಬಳೆ ದೂರಿದರು.

‘ಈಗಾಗಲೇ 17 ಜನರ ಮೇಲೆ ಕೇಸ್ ದಾಖಲಾಗಿದ್ದು, ಈಗ ಮತ್ತೆ 13 ಜನರನ್ನು ಬಂಧಿಸಲಾಗಿದೆ. ಒಟ್ಟು 81 ರೈತರನ್ನು ಗುರಿಯಾಗಿಸಿಕೊಂಡು ಸರ್ಕಾರ ದೌರ್ಜನ್ಯ ಎಸಗುತ್ತಿದೆ. ಆದರೆ, ಮಹಾಲಿಂಗಪುರ ಮತ್ತು ಮುಧೋಳ ಠಾಣೆಗಳಲ್ಲಿ ರೈತರು ಕಾರ್ಖಾನೆ ಮಾಲೀಕರ ವಿರುದ್ಧ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಜಿಲ್ಲಾಡಳಿತ ಕಾರ್ಖಾನೆ ಮಾಲೀಕರೊಂದಿಗೆ ಶಾಮೀಲಾಗಿದೆ’ ಎಂದು ರೈತ ಮುಖಂಡ ಮಹೇಶ ಪಾಟೀಲ ಆರೋಪಿಸಿದರು.

‘ನಮ್ಮ ಹೋರಾಟಕ್ಕೆ ರಾಜಕೀಯ ಬಣ್ಣ ಬೇಡ ತಾಲೂಕಿನ ರೈತರ ಹೋರಾಟವು ಸಂಪೂರ್ಣವಾಗಿ ಗಾಂಧಿವಾದಿ ಹಾಗೂ ಶಾಂತಿಯುತವಾಗಿದೆ. ಇದು ಯಾವುದೇ ರಾಜಕೀಯ ಪಕ್ಷದ ಪ್ರೇರಿತ ಹೋರಾಟವಲ್ಲ’ ಎಂದು ಹೇಳಿದರು.

‘ರೈತರ ಮೇಲಿನ ಸುಳ್ಳು ಮೊಕದ್ದಮೆಗಳನ್ನು ಕೂಡಲೇ ವಾಪಸ್ ಪಡೆಯಬೇಕು ಮತ್ತು ಬಾಕಿ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು. ಈ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 3 ದಿನಗಳ ಗಡುವು ನೀಡಲಾಗುವುದು. ಒಂದು ವೇಳೆ ಸರ್ಕಾರ ಸ್ಪಂದಿಸದಿದ್ದರೆ ಜಿಲ್ಲೆಯಾದ್ಯಂತ ರೈತರು ಬೀದಿಗಿಳಿದು 'ಜೈಲು ಭರೋ' ಚಳವಳಿ ಹಮ್ಮಿಕೊಳ್ಳಲಿದ್ದಾರೆ ಎಂದು ಸಂಘಟನೆ ಎಚ್ಚರಿಸಿದೆ.

ಸರ್ಕಾರ ಘೋಷಿಸಿದ ₹ 50 ಹಾಗೂ ಐಸಿಪಿಎಲ್ ಸಕ್ಕರೆ ಕಾರ್ಖಾನೆ ನೀಡಿದ ಸಹಾಯಧನ ಸೇರಿ ಒಟ್ಟು ₹ 100 ನೀಡಿದ ಕಾರ್ಖಾನೆಗೆ ಇದೇ ವೇಳೆ ರೈತ ಸಂಘ ಕೃತಜ್ಞತೆ ಸಲ್ಲಿಸಿತು.

ಪತ್ರಿಕಾಗೋಷ್ಠಿಯಲ್ಲಿ ಸುಭಾಷ ಶಿರಬೂರ, ದುಂಡಪ್ಪ ಯರಗಟ್ಟಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-19-1914071679

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.