ಬಾಗಲಕೋಟೆ: ಜಿಲ್ಲೆಯ ಮುಧೋಳ ನಗರದ ದಾನಮ್ಮದೇವಿ ದೇವಸ್ಥಾನದ ಆವರಣದಲ್ಲಿ ಸೆ.16ರಂದು ವಸ್ತು ಪ್ರದರ್ಶನ ಮತ್ತು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿದ ಜಿಲ್ಲಾ ಕೌಶಲ ಮಿಷನ್ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇಳದಲ್ಲಿ 30ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿವೆ. ವಿವಿಧ ಇಲಾಖೆಗಳ ಸೇವೆ, ಪಂಚ ಗ್ಯಾರಂಟಿ ಯೋಜನೆಗಳ ಕುರಿತ ಮಾಹಿತಿ ಮತ್ತು ವಸ್ತು ಪ್ರದರ್ಶನ ಸಹ ಏರ್ಪಡಿಸಲಾಗುವುದು ಎಂದರು.

ಉದ್ಯೋಗ ಮೇಳವು ಬೆಳಿಗ್ಗೆ 9.30 ರಿಂದ ಸಂಜೆ 4ರವರೆಗೆ ನಡೆಯಲಿದೆ. ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವೀಧರರು, ಸ್ನಾತಕೋತ್ತರ ಹಾಗೂ ವೃತ್ತಿಪರ ಪದವೀಧರರು ಭಾಗವಹಿಸಬಹುದಾಗಿದೆ. ನೋಂದಣಿ ಮಾಡಿಕೊಳ್ಳಬಹುದು. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ಅಂಕಪಟ್ಟಿ, ಆಧಾರ್ ಕಾರ್ಡ್, ಸ್ವವಿವರ ತರಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ, ಜಿಲ್ಲಾ ಕೌಶಲ ಅಭಿವೃದ್ದಿ ಅಧಿಕಾರಿ ಗುರುಪಾದಯ್ಯ ಹಿರೇಮಠ, ಕೈಗಾರಿಕೆ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ, ಸರ್ಕಾರಿ ಐಟಿಐ ಕಾಲೇಜಿನ ಪ್ರಾಚಾರ್ಯ ಎಸ್.ಎಸ್.ಹಿರೇಮಠ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.