ಮುಧೋಳ: ನಗರಸಭೆಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಪೌರಾಯುಕ್ತರು ಯಾವುದೇ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಎಂದು ನಗರಸಭೆ ಮಾಜಿ ಅಧ್ಯಕ್ಷ ಗುರುಪಾದ ಕುಳಲಿ ಆರೋಪಿಸಿದ್ದಾರೆ.

ಸರ್ಕಾರದ ಜನವಿರೋಧಿ ನಿಲುವು ಖಂಡಿಸಿ ಬಿಜೆಪಿ ನಗರ ಮಂಡಲದಿಂದ ಮೇ 26ರಂದು ಬೆಳಿಗ್ಗೆ 10 ಗಂಟೆಗೆ ಪ್ರತಿಭಟಿಸಲಾಗುವುದು ಎಂದು ತಿಳಿಸಿದ್ದಾರೆ.

ನಗರದಲ್ಲಿ 20 ರಿಂದ 25 ದಿನಗಳಿಗೆ ಒಮ್ಮೆ ನೀರು ಬಿಡಲಾಗುತ್ತಿದೆ. ಬೀದಿ ದೀಪವಿಲ್ಲದೆ ಜನರಿಗೆ ತೊಂದರೆಯಾಗುತ್ತಿದೆ. ಚರಂಡಿ ಸ್ವಚ್ಛವಾಗಿಲ್ಲ. ನಗರದ ರಸ್ತೆಯಲ್ಲಿ ತೆಗ್ಗುಗಳು ಬಿದ್ದಿವೆ ಅವುಗಳನ್ನು ಮುಚ್ಚುತ್ತಿಲ್ಲ. ನಗರದ ಎರಡು ಸ್ಮಶಾನಗಳಲ್ಲಿ ಹೈಮಾಸ್ಟ್ ದೀಪ ಹಾಳಾಗಿದ್ದು ದುರಸ್ತಿ ನಡೆಯುತ್ತಿಲ್ಲ. ನಗರಸಭೆ ಪಕ್ಕ ₹4 ಕೋಟಿ ವೆಚ್ಚದ ತರಕಾರಿ ಮಾರುಕಟ್ಟೆ ನಿರ್ಮಿಸಿ ಉದ್ಘಾಟನೆಯಾದರೂ ಉಪಯೋಗವಾಗುತ್ತಿಲ್ಲ. ಇದರಿಂದ ಸಣ್ಣ ವ್ಯಾಪಾರಿಗಳಿಗೆ ತೊಂದರೆಯಾಗುತ್ತಿದೆ. ಈ ಎಲ್ಲ ವಿಷಯಗಳನ್ನು ಪೌರಾಯುಕ್ತರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ ಎಂದಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-19-2023649309

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.