ಮುಧೋಳ: ವಿದ್ಯಾರ್ಥಿಗಳು ನಿಖರ ಗುರಿ ಹಾಕಿಕೊಂಡು ನಿರಂತರ ಪ್ರಯತ್ನ ಮಾಡುವುದರಿಂದ ಯಶಸ್ಸು ಖಚಿತವಾಗಿ ದೊರೆಯಲಿದೆ ಎಂದು ತಹಶೀಲ್ದಾರ್ ಡಾ. ಚಿಕ್ಕಪ್ಪ ನಾಯ್ಕ್ ಹೇಳಿದರು.

ನಗರದ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಕರ್ನಾಟಕ ಪ್ರದೇಶ ಕುರುಬರ ಸಂಘ ತಾಲ್ಲೂಕು ಘಟಕದ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ರಾಜಮಾತಾ ಮಹಾರಾಣಿ ಅಹಿಲ್ಯಾಬಾಯಿ ಹೋಳ್ಕರ್ ಅವರ 301ನೇ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣವನ್ನು ವಿದ್ಯಾರ್ಜನೆಗೆ ಮಾತ್ರ ಬಳಕೆ ಮಾಡಿಕೊಳ್ಳುವುದರಿಂದ ಹೆಚ್ಚು ಪರಿಣಾಮಕಾರಿಯಾಗಿ ಬೆಳೆಯಬಹುದು. ಯಾರದೋ ಒತ್ತಡಕ್ಕೆ ಮಣಿಯದೆ ನಿಮಗೆ ಆಸಕ್ತಿ ಇರುವ ವಿಷಯದಲ್ಲಿ ಮುಂದುವರಿಯಬೇಕು ಎಂದು ಸಲಹೆ ನೀಡಿದರು.

ಪಾಲಕರು ಮಕ್ಕಳ ಹೆಸರಿನಲ್ಲಿ ಆಸ್ತಿಯನ್ನು ಮಾಡದೆ ಅವರಿಗೆ ಗುಣಮಟ್ಟದ ಶಿಕ್ಷಣ ನೀಡಿ ಮಕ್ಕಳನ್ನೇ ಸಮಾಜದ ಆಸ್ತಿಯನ್ನಾಗಿ ಮಾಡಲು ಮುಂದಾಗಬೇಕು ಎಂದರು.

ಧಾರವಾಡದ ಸ್ಪರ್ಧಾ ಜೀನಿಯಸ್ ಅಕಾಡೆಮಿಯ ಸಿದ್ದಣ್ಣ ದಳವಾಯಿ ಮಾತನಾಡಿ ಮಕ್ಕಳಿಗೆ ಶಿಕ್ಷಣದೊಂದಿಗೆ ಕೌಶಲವನ್ನು ಕಲಿಸುವ ವಾತಾವರಣ ನಿರ್ಮಿಸುವ ಅಗತ್ಯ ಇದೆ ಎಂದು ಅಭಿಪ್ರಾಯಪಟ್ಟರು.

ಸಿಪಿಐ ಎಂ.ನಾಗರಡ್ಡಿ ಮಾತನಾಡಿ, ಡ್ರಗ್ಸ್ ಹಾಗೂ ಸಾಮಾಜಿಕ ಜಾಲತಾಣದ ಬಗ್ಗೆ ವಿದ್ಯಾರ್ಥಿಗಳು ಜಾಗರೂಕರಾಗಿ ಇರಬೇಕು ಎಂದು ಕಿವಿಮಾತು ಹೇಳಿದರು.

ಸಮಾರಂಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಶಂಕರ ತಿಮ್ಮಾಪುರ, ಇನಸೈಟ್ ಐಎಎಸ್ ಸಂಸ್ಥಾಪಕ ವಿನಯಕುಮಾರ ಜಿ.ಬಿ., ಕುರುಬ ಸಂಘದ ತಾಲೂಕು ಅಧ್ಯಕ್ಷ ಯಮನಪ್ಪ ಹೊರಟ್ಟಿ, ಯುವ ಕುರುಬರ ಸಂಘದ ಅಧ್ಯಕ್ಷ ಬೀರೇಶ ಹುದ್ದಾರ, ಸಮಾಜಿಕ ಹೋರಾಟಗಾರ ಯಲ್ಲಪ್ಪ ಹೆಗಡೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-19-735569460

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.