ಬಾಗಲಕೋಟೆ: ಮಗಳನ್ನುಪ್ರೀತಿಸಿ ಮದುವೆಯಾದ ಎಂಬ ಸಿಟ್ಟಿನಿಂದ ಮಗಳನ್ನು ಮದುವೆಯಾದ ಯುವಕನನ್ನು ಯುವತಿಯ ತಂದೆ ಹಾಗೂ ಮೂವರು ಸೇರಿಕೊಂಡು ಶನಿವಾರ ತಡರಾತ್ರಿ ಜಮಖಂಡಿ ತಾಲ್ಲೂಕಿನ ಟಕ್ಕೋಡದಲ್ಲಿ ಕೊಲೆ ಮಾಡಿದ್ದಾರೆ.

ಜೈನ ಸಮುದಾಯಕ್ಕೆ ಸೇರಿದ ಭುಜಬಲಿ ಕರ್ಜಗಿ (34) ಕೊಲೆಯಾದ ಯುವಕ.

ಕ್ಷತ್ರಿಯ ಸಮಾಜದ ತಮ್ಮನಗೌಡ ಪಾಟೀಲ ಪುತ್ರಿ ಭಾಗ್ಯಶ್ರೀ ಅನ್ನು ಭುಜಬಲಿ ಕರ್ಜಗಿ ಪ್ರೀತಿಸಿ ಕೆಲ ತಿಂಗಳ ಹಿಂದೆ ರಿಜಿಸ್ಟರ್ ಮದುವೆಯಾಗಿದ್ದರು.

ಶನಿವಾರ ರಾತ್ರಿ ಹನುಮಾನ ದೇವರ ಪಲ್ಲಕ್ಕಿ ಉತ್ಸವ ಮುಗಿಸಿ ಸಹೋದರನ ಪುತ್ರ ಸುಮೇದ್ ನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗಲು ಮುಂದಾದಾಗ ಕಾರದ ಪುಡಿ ಎರಚಲಾಗಿದೆ.

ಆಗ ಸುಮೇದ್ ಓಡಿ ಹೋಗಿದ್ದು, ಭುಜಬಲಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಸಾವಳಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ತಮ್ಮನಗೌಡ ಪಾಟೀಲ ಬಂಧಿಸಲಾಗಿದ್ದು, ಉಳಿದ ಆರೋಪಿಗಳ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಇನ್‌ಸ್ಪೆಕ್ಟರ್ ಮನೋಹರ ಕಂಚಗಾರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.