ಬಾಗಲಕೋಟೆ: ‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಲ್ಲ. ಆದರೆ, ಜವಾಬ್ದಾರಿ ವಹಿಸಿದರೆ ನಿರ್ವಹಿಸುವೆ. ಎಲ್ಲರನ್ನೂ ಒಟ್ಟಾಗಿ ಕರೆದೊಯ್ಯವ ಸಾಮರ್ಥ್ಯವಿದೆ’ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.

‘ಪಕ್ಷದ ರಾಜ್ಯ ಘಟಕದ ಉಪಾಧ್ಯಕ್ಷ, ಸಚಿವ ಸ್ಥಾನವನ್ನು ಪಕ್ಷ ನೀಡಿತ್ತೆ ಹೊರತು ನಾನು ಕೇಳಿರಲಿಲ್ಲ. ಎರಡನ್ನೂ ಯಶಸ್ವಿಯಾಗಿ ನಿಭಾಯಿಸಿದ್ದೇನೆ’ ಎಂದು ಅವರು ಶುಕ್ರವಾರ ಸುದ್ದಿಗಾರರಿಗೆ ತಿಳಿಸಿದರು.

ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಸಚಿವರಾಗಿ ಅನುಕೂಲ ಪಡೆದವರು ಮಾತನಾಡುತ್ತಿಲ್ಲ ಎಂಬ ವಿಜಯೇಂದ್ರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಮಗನ ಕೊಡುಗೆ ಏನು ಎನ್ನುವುದು ಬೇಕು. ಬೀಳಗಿ ಜನ ನನ್ನನ್ನು ಗೆಲ್ಲಿಸಿದ್ದಾರೆ ಮತ್ತು ಸೋಲಿಸಿದ್ದಾರೆ. ನಾನು ಯಾರನ್ನೂ ದೂರುವುದಿಲ್ಲ’ ಎಂದು ಹೇಳಿದರು.

‘ವಿಜಯೇಂದ್ರ ಅವರಿಗೆ ಅನುಭವದ ಕೊರತೆಯಿದ್ದು, ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆಗೆ ಪ್ರಾಮಾಣಿಕವಾಗಿ ಶ್ರಮಿಸುತ್ತಿದ್ದಾರೆ. ಅವರು ಎಲ್ಲರೊಂದಿಗೆ ಚರ್ಚಿಸಬೇಕು. ನಾನು ಯಾವುದೇ ಗುಂಪಿನಲ್ಲಿಲ್ಲ. ನನ್ನದು ಬಿಜೆಪಿ ಗುಂಪು’ ಎಂದರು.

‘ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಅದರ ವಿರುದ್ಧ ಬಿಜೆಪಿ ಗುಂಪುಗಾರಿಕೆ ಬಿಟ್ಟು ಒಗ್ಗಟ್ಟಾಗಿ ಹೋರಾಡಬೇಕು. ಪಕ್ಷದ ಹೈಕಮಾಂಡ್ ಎಲ್ಲವನ್ನೂ ಸೂಕ್ಷ್ಮವಾಗಿ ವೀಕ್ಷಿಸುತ್ತಿದೆ. ಸೂಕ್ತ ನಿರ್ಧಾರ ಕೈಗೊಳ್ಳಲಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.