ಬುಧವಾರ, 9 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಾಗಮಂಗಲ ಘಟನೆ: ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹ

Published : 14 ಸೆಪ್ಟೆಂಬರ್ 2024, 16:08 IST
Last Updated : 14 ಸೆಪ್ಟೆಂಬರ್ 2024, 16:08 IST
ಫಾಲೋ ಮಾಡಿ
Comments

ಬಾಗಲಕೋಟೆ: ನಾಗಮಂಗಲ ಘಟನೆಯಲ್ಲಿ ಹಿಂದೂಗಳಿಗೆ ರಾಜ್ಯ ಸರ್ಕಾರದಿಂದ ನ್ಯಾಯ ಸಿಗುವ ಭರವಸೆ ಇಲ್ಲ. ಕೂಡಲೇ ಮಧ್ಯಪ್ರವೇಶಿಸಿ ಹಿಂದೂಗಳ ಮೇಲೆ ಎಫ್‌ಐಆರ್ ರದ್ದುಗೊಳಿಸುವಂತೆ ಹಾಗೂ ದುಷ್ಯಕೃತ್ಯಕ್ಕೆ ಕಾರಣರಾದ ಮುಸ್ಲಿಂ ಹಲ್ಲೆಕೋರರ ಮೇಲೆ ಕ್ರಮಕೈಗೊಳ್ಳುವಂತೆ ನಿರ್ದೇಶನ ನೀಡಬೇಕು ಎಂದು ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ರಾಜ್ಯಪಾಲರಿಗೆ ಮನವಿ ಮಾಡಿದ್ದಾರೆ.

ರಾಜ್ಯ ಸರ್ಕಾರ ತುಷ್ಟೀಕರಣ ನೀತಿ ಅನುಸರಿಸುತ್ತಿದೆ ಎಂಬುಕ್ಕೆ ಸ್ಪಷ್ಟ ಉದಾಹರಣೆ ಇದಾಗಿದೆ. ತಪ್ಪಿತಸ್ಥರು ಯಾರೆಂಬುದು ಜಗಜ್ಜಾಹೀರಾಗಿದ್ದರೂ ಹಿಂದೂಗಳನ್ನು ಗುರಿಯಾಗಿಸುವ ಕೆಲಸ ನಡೆದಿದೆ ಎಂದು ಆರೋಪಿಸಿದ್ದಾರೆ.

ಶಾಂತ ರೀತಿಯಿಂದ ತೆರಳುತ್ತಿದ್ದ ಗಣೇಶ ವಿಸರ್ಜನಾ ಮೆರವಣಿಗೆ ಮೇಲೆ ಪೆಟ್ರೋಲ್‌ ಬಾಂಬ್‌, ಲಾಂಗು, ಮಚ್ಚು, ರಾಡ್‌ಗಳಿಂದ ಮುಸಲ್ಮಾನ ಕಿಡಿಗೇಡಿಗಳು ಹಿಂದೂಗಳ ಅಂಗಡಿಗಳನ್ನು ಗುರಿಯಾಗಿಸಿ ಬೆಂಕಿ ಹಚ್ಚಿ ಧ್ವಂಸ ಮಾಡಿ, ಕಲ್ಲು ತೂರಾಟ ಮಾಡಿದ್ದಾರೆ.

ಹಿಂದೂಗಳು ಆಸ್ತಿಪಾಸ್ತಿ ನಷ್ಟದಿಂದ ಕಣ್ಣೀರು ಹಾಕುತ್ತಿದ್ದರೆ, ಗೃಹಸಚಿವ ಜಿ.ಪರಮೇಶ್ವರ್ ಇದೊಂದು ಸಣ್ಣ ಘಟನೆ, ಗಲಭೆ ಅಲ್ಲ ಎನ್ನುವ ಮೂಲಕ ತುಷ್ಟೀಕರಣ ಮಾಡಿ ಹಿಂದೂಗಳನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ.

ಬೆಂಗಳೂರು ಮಹಾನಗರ ಗಣೇಶ ಉತ್ಸವ ಸಮಿತಿಯ ಸದಸ್ಯರು ಟೌನ್ ಹಾಲ್ ಬಳಿ ಗಣೇಶ ಮೂರ್ತಿಯೊಂದಿಗೆ ಶಾಂತಿಯುತ ಪ್ರತಿಭಟನೆಗೆ ಮುಂದಾದ ಸಂದರ್ಭದಲ್ಲಿ ಪ್ರತಿಭಟನಾನಿರತರೊಂದಿಗೆ ಗಣಪತಿ ಮೂರ್ತಿಯನ್ನೂ ಪೊಲೀಸ್ ವಾಹನದಲ್ಲಿ ಬಂಧಿಸಿಟ್ಟಿದ್ದು ಹಿಂದೂ ಸಮಾಜದ ಧಾರ್ಮಿಕ ಭಾವನೆ ಕೆರಳಿಸುವ ಕ್ರಮವಾಗಿದೆ. ಪರಿಸ್ಥಿತಿಯನ್ನು ನಾಜೂಕಾಗಿ ನಿಭಾಯಿಸಿ ಗಣೇಶ ಮೂರ್ತಿಯ ಪಾವಿತ್ರ್ಯತೆಗೆ ಧಕ್ಕೆ ಬಾರದ ರೀತಿಯಲ್ಲಿ ಕಾಳಜಿ ವಹಿಸಬಹುದಾಗಿದ್ದ ಪೊಲೀಸರು ಅತ್ಯಂತ ಉಡಾಫೆಯಾಗಿ ವರ್ತಿಸಿರುವ ರೀತಿಯನ್ನು ಖಂಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT