ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಮಹಾಲಿಂಗಪುರದಲ್ಲಿ ಚನ್ನಮ್ಮ ವೃತ್ತದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು
ಬನಹಟ್ಟಿಯ ಪೊಲೀಸ್ ಠಾಣೆಯವರು ಹಮ್ಮಿಕೊಂಡಿದ್ದ ರಾಷ್ಟ್ರೀಯ ಏಕತೆಗಾಗಿ ಓಟ ಕಾರ್ಯಕ್ರಮಕ್ಕೆ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿ ಸಿದ್ದಪ್ಪ ಪಟ್ಟಿಹಾಳ ಚಾಲನೆ ನೀಡಿದರು
ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ ಬೀಳಗಿಯಲ್ಲಿ ಏರ್ಪಡಿಸಿದ್ದ ಮ್ಯಾರಥಾನ್ ಓಟದಲ್ಲಿ ಪೊಲೀಸ್ ಇಲಾಖೆಯ ನೌಕರರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು
ರಾಷ್ಟ್ರೀಯ ಏಕತಾ ದಿನಾಚರಣೆ ಅಂಗವಾಗಿ ಬಾದಾಮಿಯಲ್ಲಿ ಪೊಲೀಸ್ ಇಲಾಖೆ ಕಂದಾಯ ಇಲಾಖೆ ಮಾಜಿ ಸೈನಿಕರು ಮತ್ತು ವಿವಿಧ ಇಲಾಖೆಗಳ ಆಶ್ರಯದಲ್ಲಿ ಶುಕ್ರವಾರ ರಾಷ್ಟ್ರೀಯ ಏಕತಾ ಓಟ ನಡೆಯಿತು. ಪಿಎಸ್ಐ ಹನುಮಂತ ನೆರಳೆ ಪೊಲೀಸ್ ಸಿಬ್ಬಂದಿ ಮಾಜಿ ಸೈನಿಕರು ವಿವಿಧ ಇಲಾಖೆಗಳ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು
ಸರ್ದಾರ್ ವಲ್ಲಭಾಯಿ ಪಟೇಲ್ ಜನ್ಮದಿನಾಚರಣೆ ಅಂಗವಾಗಿ ಹುನಗುಂದ ಪಟ್ಟಣದಲ್ಲಿ ಪೊಲೀಸ್ ಇಲಾಖೆ ಹಮ್ಮಿಕೊಂಡಿದ್ದ ಏಕತೆಗಾಗಿ ಓಟ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸದಸ್ಯರು ಪಾಲ್ಗೊಂಡಿದ್ದರು