ಬಾಗಲಕೋಟೆ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಮೇ4 ರಂದು ಬಾಗಲಕೋಟೆ ನಗರದ 11 ಪರೀಕ್ಷಾ ಕೇಂದ್ರಗಳಲ್ಲಿ ಮಧ್ಯಾಹ್ನ 2 ರಿಂದ ಸಂಜೆ 5ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶ ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಆದೇಶ ಮಾಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಶುಕ್ರವಾರ ನಡೆದ ನೀಟ್ ಪರೀಕ್ಷೆ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಪರೀಕ್ಷಾ ಕೇಂದ್ರಗಳ 200 ಮೀಟರ್ ವ್ಯಾಪ್ತಿಯಯಲ್ಲಿನ ಝೆರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್, ಇಂಟರ್ನೆಟ್, ಸೈಬರ್ ಕೆಫೆಗಳು ಮತ್ತು ಕೋಚಿಂಗ್ ಕೇಂದ್ರಗಳನ್ನು ಪರೀಕ್ಷಾ ಅವಧಿಯಲ್ಲಿ ತೆರೆಯದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.

‘ಪರೀಕ್ಷೆ ಕಾರ್ಯದಲ್ಲಿ ತೊಡಗಿರುವ ಯಾವುದೇ ಸಿಬ್ಬಂದಿ ಮತ್ತು ಇತರರು ಮೊಬೈಲ್ ತರುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ’ ಎಂದು ತಿಳಿಸಿದರು.

‘ಪರೀಕ್ಷಾರ್ಥಿಗಳಿಗೆ ತೊಂದರೆಯಾಗದಂತೆ ಸಾರಿಗೆ ಸೌಲಭ್ಯ ಕಲ್ಪಿಸಬೇಕು. ಪರೀಕ್ಷೆ ದಿನ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯವಾಗದಂತೆ ಮತ್ತು ಪರೀಕ್ಷಾ ಕೇಂದ್ರದ ಸುತ್ತ ಆರೋಗ್ಯ ಸೇವೆ, ಅಗ್ನಿಶಾಮಕ ಸೇವೆಗಳ ಲಭ್ಯತೆ ಇರುವಂತೆ ನೋಡಿಕೊಳ್ಳಬೇಕು’ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ವ್ಯವಸ್ಥೆ, ಸಿಸಿಟಿವಿ ಕ್ಯಾಮೆರಾಗಳ ವ್ಯವಸ್ಥೆ ಸರಿಯಾಗಿ ಇರುವಂತೆ ನೋಡಿಕೊಳ್ಳಬೇಕು ಎಂದರು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಮರನಾಥ್ ರೆಡ್ಡಿ ಮಾತನಾಡಿ, ‘ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲು ಸೂಕ್ತ ಭದ್ರತೆ ವ್ಯವಸ್ಥೆ ಮಾಡಲಾಗುವುದು. ಮೊಬೈಲ್, ವಾಚ್ ಸೇರಿದಂತೆ ಪರೀಕ್ಷಾ ಕೇಂದ್ರಗಳಲ್ಲಿ ನಿಷೇಧಿತ ವಸ್ತುಗಳ ಬಗ್ಗೆ ತಿಳಿಸುತ್ತ, ವಸ್ತ್ರ ಸಂಹಿತೆ ಬಗ್ಗೆ ಸೂಕ್ಷ್ಮತೆ ಕಾಯ್ದುಕೊಳ್ಳಬೇಕು. ಯಾವುದೇ ವಿವಾದಗಳಾಗದಂತೆ ಎಚ್ಚರಿಕೆ ವಹಿಸಬೇಕು’ ಎಂದು ತಿಳಿಸಿದರು.

‘ಈ ಬಾರಿ ಪೇಪರ್ಗಳನ್ನು ಖಾಸಗಿ ವಾಹನಗಳಲ್ಲದೇ, ಭಾರತೀಯ ಅಂಚೆ ಇಲಾಖೆ ವಾಹನದಲ್ಲಿ ಸಾಗಿಸಲಾಗುತ್ತಿದೆ. ಎಲ್ಲದಕ್ಕೂ ಸೂಕ್ತ ಭದ್ರತೆ ನೀಡುವ ಕೆಲಸವಾಗಬೇಕು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.