ಗುಳೇದಗುಡ್ಡ: ಕಳೆದ ವಾರ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಕೇಂದ್ರ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದೆ. ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡುತ್ತಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜಿನಾಮೆ ನೀಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬರಗುಂಡಿ ಹೇಳಿದರು.

ಅವರು ಮಂಗಳವಾರ ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆರ್.ಎಸ್.ಎಸ್ ಮೂಲ ವ್ಯಕ್ತಿಗಳಿಂದಲೇ ನೀಟ್ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ದೇಶದಲ್ಲಿ 5 ಬಾರಿ ನೀಟ್ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ. ಆದರೂ ಸಹ ಕೇಂದ್ರ ಸರ್ಕಾರ ಎಚ್ಚೆತ್ತುಕೊಂಡಿಲ್ಲ. ದೇಶದಲ್ಲಿ ಪದೇ ಪದೇ ಡಿಸೇಲ್ ಪೆಟ್ರೋಲ್ ಗ್ಯಾಸ್ ದರ ಹೆಚ್ಚಾಗುತ್ತಿದೆ. ಇದು ಜನ ಸಾಮಾನ್ಯರ ಮೇಲೆ ಸಾಕಷ್ಟು ಹೊರೆಯಾಗುತ್ತಿದೆ. ದರ ಕಡಿಮೆ ಮಾಡುವಲ್ಲಿ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿಲ್ಲ. ಈ ಹಿಂದೆಲ್ಲ ಡಿಸೇಲ್ ಪೆಟ್ರೋಲ್ ಗ್ಯಾಸ್ ದರ ಹೆಚ್ಚಾದಾರೆ ಪ್ರತಿಭಟಿಸುತ್ತಿದ್ದ ಬಿಜೆಪಿ ಭಕ್ತರು ಎಲ್ಲಿದ್ದಾರೆ. ಈಗ ದರ ಹೆಚ್ಚಾಗಲ್ಲವೇ ಇದು ಬಿಜೆಪಿಯವರಿಗೆ ಕಾಣಿಸುತ್ತಿಲ್ಲವೇ ಎಂದು ಹೇಳಿದರು.

ಪುರಸಭೆ ಮಾಜಿ ಅಧ್ಯಕ್ಷ ವೈ.ಆರ್.ಹೆಬ್ಬಳ್ಳಿ ಮಾತನಾಡಿ, ಪದೇ ಪದೇ ಪ್ರಶ್ನೆಪತ್ರಿಕೆ ಸೋರಿಕೆಯಾಗಿ ಮಕ್ಕಳ ಭವಿಷ್ಯದ ಜೊತೆ ಆಟವಾಡುವದು ಸರಿಯಲ್ಲ ಯಾರೇ ತಪ್ಪು ಮಾಡಿದರೂ ಅವರಿಗೆ ಶಿಕ್ಷೆ ಯಾಗಬೇಕು. ಕೇಂದ್ರ ಸರ್ಕಾರ ಮೊದಲೇ ಎಚ್ಚೆತ್ತುಕೊಂಡಿದ್ದರೆ ಈ ರೀತಿ ಘಟನೆಯಾಗುತ್ತಿರಲಿಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಖಂಡರಾದ ರಮೇಶ ಬೂದಿಹಾಳ, ಗೋಪಾಲ ಭಟ್ಟಡ, ಬಾಬು ಬೊಂಬಲೇಕರ, ಜಮೀರ ಮೌಲ್ವಿ, ಚಿದಾನಂದ ಕಾಟವಾ, ರಾಜಶೇಖರ ಹೆಬ್ಬಳ್ಳಿ, ಮೂಕಪ್ಪ ಹೂನೂರ, ವಿನೋದ ಮದ್ದಾನಿ, ರಾಜು ಸಂಗಮ, ಯಲಗುರದಪ್ಪ ಗೌಡರ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260520-19-69816471

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.