ಸೋಮವಾರ, 5 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರವಾಸಿಗರಿಗೆ ಸುರಕ್ಷತೆಯ ಕೊರತೆ

Last Updated 3 ಆಗಸ್ಟ್ 2021, 3:01 IST
ಅಕ್ಷರ ಗಾತ್ರ

ರಬಕವಿ ಬನಹಟ್ಟಿ: ತಾಲ್ಲೂಕಿನ ಹಿಪ್ಪರಗಿ ಜಲಾಶಯ ಈಗ ಪ್ರವಾಸಿಗರ ನೆಚ್ಚಿನ ತಾಣವಾಗಿದೆ. ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಪ್ರತಿನಿತ್ಯ ರಬಕವಿ ಬನಹಟ್ಟಿ, ಜಮಖಂಡಿ ಹಾಗೂ ಅಥಣಿ ತಾಲ್ಲೂಕಿನ ನೂರಾರು ಜನರು ವೀಕ್ಷಣೆ ಮಾಡಲು ಬರುತ್ತಿದ್ದಾರೆ.

ಆದರೆ ಜಲಾಶಯದ ಸುತ್ತಮುತ್ತ ಯಾವುದೇ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೆ ಇರುವುದರಿಂದ ಅಪಾಯಕ್ಕೆ ಆಹ್ವಾನ ನೀಡಿದಂತಾಗಿದೆ. ವೀಕ್ಷಣೆ ಮಾಡಲು ಬಂದ ಜನರು ಜಲಾಶಯದ ಎಲ್ಲ ಕಡೆಗೂ ಓಡಾಡುತ್ತಾರೆ. ಇಲ್ಲಿ ಹಾಕಲಾದ ಕಬ್ಬಿಣ ಸಲಾಕೆಯ ತಡೆಗೋಡೆಗಳು ಬಹಳಷ್ಟು ಚಿಕ್ಕದಾಗಿವೆ. ಜನರು ಇವುಗಳ ಮೇಲೆ ಕುಳಿತುಕೊಂಡು ಫೋಟೊ ಮತ್ತು ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಾರೆ. ಅದೇ ರೀತಿಯಾಗಿ ಚಿಕ್ಕ ಮಕ್ಕಳನ್ನು ನದಿಯ ಹತ್ತಿರಕ್ಕೆ ಕರೆದುಕೊಂಡು ಹೋಗುತ್ತಾರೆ. ಈ ಸಲಾಕೆಗಳು ಕೂಡಾ ಬಹಳಷ್ಟು ಹಳೆಯದಾಗಿವೆ ಮತ್ತು ತುಕ್ಕು ಹಿಡಿದಿವೆ.

ಗೇಟ್‍ಗಳನ್ನು ಹಾಕುವ ಮತ್ತು ತೆಗೆಯುವ ಯಂತ್ರದ ಸೇತುವೆಯ ಮೇಲೆಯೂ ಜನರು ಹೋಗುತ್ತಾರೆ. ಇಲ್ಲಿ ಹೋಗದಂತೆ ಯಾವುದೇ ನಿರ್ಬಂಧ ಇಲ್ಲವಾಗಿವೆ.
ಆದ್ದರಿಂದ ಯಾವುದೇ ಅಪಾಯ ಸಂಭವಿಸುವುದಕ್ಕಿಂತ ಮೊದಲು ಸಂಬಂಧಪಟ್ಟ ಇಲಾಖೆಯವರು ಇತ್ತ ಗಮನ ನೀಡಿ ಹಿಪ್ಪರಗಿ ಜಲಾಶಯದಲ್ಲಿ ಸುರಕ್ಷತೆಯ ಕ್ರಮಗಳನ್ನು ತೆಗೆದುಕೊಳ‍್ಳಬೇಕಾಗಿದೆ ಎನ್ನುತ್ತಾರೆ ಸ್ಥಳೀಯರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT