ಸಮಯಕ್ಕೆ ಸರಿಯಾಗಿ ಆಗದ ವೇತನ: ಸಾರಿಗೆ ಸಂಸ್ಥೆ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ?

ಬಾಗಲಕೋಟೆ: ಸಮಯಕ್ಕೆ ಸರಿಯಾಗಿ ವೇತನ ಆಗುತ್ತಿಲ್ಲ. ಆಗುವ ಅರ್ಧ ವೇತನದಲ್ಲಿ ಜೀವನ ನಿರ್ವಹಣೆ ಕಷ್ಟವಾಗಿದೆ ಎಂದು ಮನನೊಂದು ವಾಯವ್ಯ ಸಾರಿಗೆ ಸಂಸ್ಥೆ ಸಿಬ್ಬಂದಿಯೊಬ್ಬರು ಮಂಗಳವಾರ ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಅವರ ಪರಿಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆಗಾಗಿ ರಾತ್ರಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಾದಾಮಿ ಡಿಪೋದಲ್ಲಿ ಕಳೆದ 13 ವರ್ಷಗಳಿಂದ ಚಾಲಕ ಕಂ ನಿರ್ವಾಹಕ ಆಗಿ ಕೆಲಸ ಮಾಡುತ್ತಿರುವ ಭರಮಪ್ಪ ಗೊಂದಿ (44) ಆತ್ಮಹತ್ಯೆಗೆ ಪ್ರಯತ್ನಿಸಿದವರು. ಸಮೀಪದ ಕೆರೂರಿನಲ್ಲಿ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಭರಮಪ್ಪ ವಾಸವಿದ್ದರು.
'ಕೋವಿಡ್ ಸಂಕಷ್ಟದ ನಂತರ ಆರ್ಥಿಕ ಪರಿಸ್ಥಿತಿ ದುರ್ಲಭವಾಗಿದೆ. ಸಮಯಕ್ಕೆ ಸರಿಯಾಗಿ ವೇತನ ಆಗದೇ ಬದುಕಿಗೆ ತೊಂದರೆ ಆಗಿದೆ ಎಂದು ಅಣ್ಣ ಬೇಸರ ಪಟ್ಟುಕೊಂಡಿದ್ದನು. ಅತ್ತಿಗೆ ರೂಪಾ ಅವರ ಬಳಿಯೂ ಬೆಳಿಗ್ಗೆ ಅಳಲು ತೋಡಿಕೊಂಡಿದ್ದನು. ಈ ಬಾರಿ ದೀಪಾವಳಿ ಹಬ್ಬಕ್ಕೆ ಹಣದ ತೊಂದರೆ ಆಗಿತ್ತು. ಹೀಗಾಗಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾನೆ' ಎಂದು ಸಹೋದರ ಪರಸಪ್ಪ ಗೊಂದಿ 'ಪ್ರಜಾವಾಣಿ'ಗೆ ತಿಳಿಸಿದರು.
ಅರ್ಧ ವೇತನ ಕೊಡಲಾಗಿದೆ: ಈ ಬಗ್ಗೆ 'ಪ್ರಜಾವಾಣಿ'ಗೆ ಪ್ರತಿಕ್ರಿಯಿಸಿದ ಹಿರಿಯ ಅಧಿಕಾರಿಯೊಬ್ಬರು. ಈಗಾಗಲೇ ಅರ್ಧ ವೇತನ ನೀಡಲಾಗಿದೆ ನೀಡಲಾಗಿದೆ ಎಂದು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.