ಭಾನುವಾರ, ಸೆಪ್ಟೆಂಬರ್ 25, 2022
29 °C

ಸಿಡಿಲು ಬಡಿದು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಜಿಲ್ಲೆಯಲ್ಲಿ ಸೋಮವಾರ ರಾತ್ರಿಯಿಡೀ ಸಿಡಿಲು ಸಹಿತ ಭಾರಿ ಮಳೆ ಸುರಿದಿದೆ. ಇಳಕಲ್‌ ತಾಲ್ಲೂಕಿನ ದಮ್ಮೂರ ಗ್ರಾಮದಲ್ಲಿ ಸಿಡಿಲು ಬಡಿದು ಸಣ್ಣನೀಲಪ್ಪ ಹಾದಿಮನಿ ಎಂಬುವವರು ಮೃತಪಟ್ಟಿದ್ದಾರೆ.

ಬಾದಾಮಿಯ ಅಗಸ್ತ್ಯ ತೀರ್ಥ ಹೊಂಡ ತುಂಬಿ ಹರಿಯುತ್ತಿದ್ದು, ಬಾದಾಮಿಯ ಹಲವು ಪ್ರದೇಶಗಳಿಗೆ, ಮನೆಗಳಿಗೆ ನೀರು ನುಗ್ಗಿದೆ. ಇದೇ ತಾಲ್ಲೂಕಿನ ನೀರಲಕೇರಿ ಗ್ರಾಮದ ಮನೆಗಳಿಗೆ ಪಕ್ಕದ ಗುಡ್ಡದಿಂದ ಬಂದ ನೀರು ಹೊಕ್ಕಿದೆ.

ಮುಧೋಳ ತಾಲ್ಲೂಕಿನ ಯಡಹಳ್ಳಿ ಬಳಿ ಹಳ್ಳ ಉಕ್ಕಿ ಸೇತುವೆ ಕೊಚ್ಚಿ ಹೋಗಿರುವುದರಿಂದ ಮುಧೋಳ– ಅನಗವಾಡಿಗೆ ಸಂಪರ್ಕಿಸುವ ರಸ್ತೆಯಲ್ಲಿ ಸಂಚಾರ ಬಂದ್ ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.