ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಸತಿ ಶಾಲೆಗಳಲ್ಲಿ ಆನ್‌ಲೈನ್ ಶಿಕ್ಷಣ ವ್ಯವಸ್ಥೆ: ಗೋವಿಂದ ಕಾರಜೋಳ

ಡಾ.ಗುರುರಾಜ ಕರಜಗಿ ನೆರವು ಪಡೆಯಲು ತೀರ್ಮಾನ: ಗೋವಿಂದ ಕಾರಜೋಳ
Last Updated 17 ಜೂನ್ 2020, 12:03 IST
ಅಕ್ಷರ ಗಾತ್ರ

ಬಾಗಲಕೋಟೆ: 'ಕೋವಿಡ್–19 ಸಂಕಷ್ಟದ ಹಿನ್ನೆಲೆಯಲ್ಲಿ ರಾಜ್ಯದ ವಸತಿ ಶಾಲೆಗಳಲ್ಲಿ ಆನ್‌ಲೈನ್ ಶಿಕ್ಷಣಕ್ಕೆ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಅದರ ಸಾಧಕ–ಬಾಧಕಗಳ ಬಗ್ಗೆ ಪರಾಮರ್ಶಿಸಲು ಹಿರಿಯ ಶಿಕ್ಷಣ ತಜ್ಞ ಡಾ.ಗುರುರಾಜ ಕರ್ಜಗಿ ಅವರ ನೆರವು ಪಡೆಯಲಾಗುತ್ತಿದೆ‘ ಎಂದು ಸಮಾಜ ಕಲ್ಯಾಣ ಸಚಿವರೂ ಆದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ಮುಧೋಳ ತಾಲ್ಲೂಕು ಮೆಳ್ಳಿಗೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ’ಆರ್ಥಿಕ ಅಡಚಣೆ ನಡುವೆಯೂ ಸಮಾಜ ಕಲ್ಯಾಣ ಇಲಾಖೆಯಿಂದ 6 ಲಕ್ಷ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ‘ ಎಂದರು.

ಸಮಾಜ ಕಲ್ಯಾಣ ಇಲಾಖೆಯ ಎಸ್‌ಇಪಿ/ಟಿಎಸ್‌ಪಿ ಯೋಜನೆಯ ಅನುದಾನದಡಿ ₹60 ಕೋಟಿ ವೆಚ್ಚದಲ್ಲಿ ಮುಧೋಳ, ಬೆಳಗಾವಿ ಜಿಲ್ಲೆ ಅಥಣಿ, ಕೊಪ್ಪಳ ಹಾಗೂ ಸವದತ್ತಿಯಲ್ಲಿ ಚಾಲಕರ ತರಬೇತಿ ಕೇಂದ್ರಗಳನ್ನು ಆರಂಭಿಸಲಾಗುವುದು. ಪ್ರತೀ ಕೇಂದ್ರಕ್ಕೆ ₹15 ಕೋಟಿ ವ್ಯಯಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT