ಬಾಗಲಕೋಟೆ: ಪಂಚಮಸಾಲಿ ಸಮಾಜ ದೊಡ್ಡ ಸಮಾಜವಾಗಿರುವುದರಿಂದ ಸಣ್ಣ ಪುಟ್ಟ ಬಿನ್ನಾಭಿಪ್ರಾಯ ಬರುತ್ತವೆ. ಅವುಗಳನ್ನು ನಾಲ್ಕು ಗೋಡೆಗಳ ಮಧ್ಯೆ ಬಗೆಹರಿಸಿಕೊಳ್ಳುತ್ತೇವೆ ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.

ಬಾಗಲಕೋಟೆಯಲ್ಲಿ ಶನಿವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರ ಆರೋಗ್ಯ ವಿಚಾರಣೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜಕ್ಕೆ ಹಿರಿಯರಾದ ಎಸ್.ಅರ್. ಕಾಶಪ್ಪನವರ ಅವರಿಂದ ಹಿಡಿದು ಬಹಳಷ್ಟು ಹಿರಿಯರು ದುಡಿದಿದ್ದಾರೆ ಎಂದರು.

ಸಮಾಜದ ಎಲ್ಲ ಬಾಂಧವರಿಗೆ ಅನುಕೂಲವಾಗಲಿ ಎಂದು ಸಮಾಜದ ಎಲ್ಲ ಹಿರಿಯರ ತೀರ್ಮಾನದ ಬಳಿಕ ಮೂರು ಪೀಠಗಳಾಗಿವೆ. 2008ರಲ್ಲೇ ಐದು ಪಿಠಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ. ನಾಲ್ಕು ಪುರುಷ ಪೀಠ, ಒಂದು ಮಹಿಳಾ ಪೀಠ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.

ಪೀಠಕ್ಕೆ ಮತ್ತೊಬ್ಬರನ್ನು ಕೂಡಿಸುವ ಶಾಸಕ ವಿಜಯಾನಮದ ಕಾಸಪ್ಪನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಸ್ವಲ್ವ ಭಿನ್ನಾಭಿಪ್ರಾಯ ಬಂದಿದ್ದರಿಂದ ಸಮಸ್ಯೆಯಾಗಿದೆ. ನಮ್ಮ ಹಿರಿಯರು ಕುಳಿತು ಸಮಸ್ಯೆ ಬಗೆಹರಿಸುತ್ತಾರೆ ಎಂದರು.

ಮನಸ್ಸಿಗೆ ಹಚ್ಚಿಕೊಳ್ಳದಂತೆ ಶ್ರೀಗಳಿಗೆ ಹೇಳಿದ್ದೇವೆ. ಸೂರ್ಯ, ಚಂದ್ರರಿಗೆ ಗ್ರಹಣ ಹಿಡಿಯುತ್ತದೆ. ಅದು ಶಾಶ್ವತ ಅಲ್ಲ. ಶ್ರೀರಾಮನೇ ಹದಿನಾಲ್ಕು ವರ್ಷ ವನವಾಸ ಮಾಡಿದ್ದರು. ಯಾವುದೂ ಶಾಶ್ವತವಲ್ಲ. ಎಲ್ಲವೂ ಸರಿ ಹೋಗುತ್ತದೆ ಎಂದು ತಿಳಿಸಿದ್ದೇವೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.