ಶನಿವಾರ, 13 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಗಲಕೋಟೆ | ಕಾರಿಗೆ ಹಗ್ಗ ಕಟ್ಟಿ ಎಳೆದು ಬಿಜೆಪಿ ಪ್ರತಿಭಟನೆ

Published 17 ಜೂನ್ 2024, 7:25 IST
Last Updated 17 ಜೂನ್ 2024, 7:25 IST
ಅಕ್ಷರ ಗಾತ್ರ

ಬಾಗಲಕೋಟೆ: ಪೆಟ್ರೋಲ್ ಡೀಸೆಲ್ ಬೆಲೆ ಹೆಚ್ಚಳ ಖಂಡಿಸಿ ಸೋಮವಾರ ಬಿಜೆಪಿ ಮುಖಂಡರು ಕಾರಿಗೆ ಹಗ್ಗ ಕಟ್ಟಿ ಎಳೆದುಕೊಂಡು ಹೋಗುವ ಮೂಲಕ ಪ್ರತಿಭಟನೆ ಮಾಡಿದರು.

ಎತ್ತಿನ ಬಂಡಿ, ಸೈಕಲ್ ಹೊಡೆಯುವ ಮೂಲಕ ಬೆಲೆ ಸಾರ್ವಜನಿಕರಿಗೆ ಹೊರೆಯಾಗುವ ಬೆಲೆ ಹೆಚ್ಚಳ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಗ್ಯಾರಂಟಿ ಹೆಸರಿನಲ್ಲಿ ಸೌಲಭ್ಯ ನೀಡಿದಂತೆ ಮಾಡಿ, ಇನ್ನೊಂದೆಡೆ ಬೆಲೆ ಹೆಚ್ಚಳ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಕಿತ್ತುಕೊಳ್ಳುತ್ತಿದೆ ಎಂದು ಆರೋಪಿಸಿದರು.

ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಶಾಂತಗೌಡ ಪಾಟೀಲ, ಬಸವರಾಜ ಯಂಕಂಚಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT