ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹುನಗುಂದ: ನಾಗರತ್ನಾ ಭಾವಿಕಟ್ಟಿ ಅವರಿಗೆ ಫ.ಗು.ಹಳಕಟ್ಟಿ ಪ್ರಶಸ್ತಿ

Published 30 ಜೂನ್ 2024, 13:20 IST
Last Updated 30 ಜೂನ್ 2024, 13:20 IST
ಅಕ್ಷರ ಗಾತ್ರ

ಹುನಗುಂದ: ಪಟ್ಟಣದ ವಿ.ಮ. ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕಿ ನಾಗರತ್ನಾ ಭಾವಿಕಟ್ಟಿ ಅವರಿಗೆ ಇಳಕಲ್ ಚಿತ್ತರಗಿ ವಿಜಯಮಹಾಂತೇಶ ಸಂಸ್ಥಾನಮಠದಿಂದ ಕೊಡ ಮಾಡುವ ಫ.ಗು. ಹಳಕಟ್ಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇಳಕಲ್‌ನಲ್ಲಿ ಜುಲೈ 2ರಂದು ಸಂಜೆ 5ಕ್ಕೆ ವಚನ ಪಿತಾಮಹ ಡಾ.ಫ.ಗು. ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ನಡೆಯುವ ವಚನ ಸಾಹಿತ್ಯ ಸಂರಕ್ಷಣಾ ದಿನದಂದು ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಉಪನ್ಯಾಸಕಿ ನಾಗರತ್ನಾ ಅಶೋಕ ಭಾವಿಕಟ್ಟಿ ಅವರು ವಚನ ಸಾಹಿತ್ಯ ಪರಿಷತ್ತಿನ ಹುನಗುಂದ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಹಲವು ಕ್ರಿಯಾಶೀಲ ಚಟುವಟಿಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 100ಕ್ಕೂ ಹೆಚ್ಚು ಉಪನ್ಯಾಸ ಮತ್ತು ಗೋಷ್ಠಿಗಳಲ್ಲಿ ಭಾಗವಹಿಸಿ ಗಮನ ಸೆಳೆದಿದ್ದಾರೆ. ಮಹಿಳೆಯರ ಹಕ್ಕುಗಳು, ಮಹಿಳೆಯರ ಸಬಲೀಕರಣ ಕುರಿತು ಉಪನ್ಯಾಸ ನೀಡಿದ್ದಾರಲ್ಲದೇ ಮಾನವ ಹಕ್ಕುಗಳ ಕುರಿತು ರಾಷ್ಟ್ರಮಟ್ಟದ ವಿಚಾರಸಂಕಿರಣದಲ್ಲಿ ಭಾಗವಹಿಸಿ ಗಮನ ಸೆಳೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT