ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಕೆಪಿಎಸ್ ಚುನಾವಣೆ: ಟಿಕೆಟ್‌ಗಾಗಿ ಪೈಪೋಟಿ

ಬಾದಾಮಿ ತಾಲ್ಲೂಕಿನಲ್ಲಿ ಒಟ್ಟು 51 ಪಿಕೆಪಿಎಸ್ ಸಹಕಾರಿ ಸಂಘ
Last Updated 18 ಅಕ್ಟೋಬರ್ 2020, 16:37 IST
ಅಕ್ಷರ ಗಾತ್ರ

ಗುಳೇದಗುಡ್ಡ: ಜಿಲ್ಲಾ ಕೇಂದ್ರದ ಸಹಕಾರಿ ಬ್ಯಾಂಕ್ ಚುನಾವಣೆ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಬಾದಾಮಿ ತಾಲ್ಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ಪಿಕೆಪಿಎಸ್) ಕ್ಷೇತ್ರದಿಂದ ಆಯ್ಕೆಯಾಗಲು ಈ ಬಾರಿ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಭಾರಿ ಪೈಪೋಟಿ ನಡೆದಿದೆ.

ಬಾದಾಮಿ ತಾಲ್ಲೂಕಿನಲ್ಲಿ ಒಟ್ಟು 51 ಪಿಕೆಪಿಎಸ್ ಸಹಕಾರಿ ಸಂಘಗಳಿವೆ. ಕಳೆದ ಬಾರಿ ಪಿಕೆಪಿಎಸ್ ಕ್ಷೇತ್ರದಿಂದ ಬಿಜೆಪಿಯ ಕುಮಾರಗೌಡ ಜನಾಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

ಕಾಂಗ್ರೆಸ್ ನಿಂದ ಮೂವರು : ಕಾಂಗ್ರೆಸ್ ಪಕ್ಷದಿಂದ ಗುಳೇದಗುಡ್ಡದ ಬಸವೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂಜಯ ಬರಗುಂಡಿ ಅವರು ರಾಜಕೀಯ ಮತ್ತು ಸಹಕಾರಿ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದಾರೆ. ಅವರು ಈಗಾಗಲೆ ಒಂದು ಸುತ್ತು ಪ್ರಚಾರ ನಡೆಸಿದ್ದಾರೆ

ಬಾದಾಮಿಯ ಮೈಲಾರಲಿಂಗೇಶ್ವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಮಹೇಶ ಹೊಸಗೌಡರ ಅವರು ರಾಜಕೀಯ, ಶೈಕ್ಷಣಿಕ ಹಾಗೂ ಸಹಕಾರಿ ಕ್ಷೇತ್ರದ ಮೂಲಕ ತಮ್ಮದೇ ಆದ ಸಂಘಟನೆಯೊಂದಿಗೆ ಈಗಾಗಲೇ ಹೆಸರು ಮಾಡಿದ್ದಾರೆ. ಕೆರೂರ ಭಾಗದ ಡಾ. ಎಂ.ಜಿ. ಕಿತ್ತಲಿ ಅವರು ಜಿ.ಪಂ. ಸದಸ್ಯರಾಗಿ, ಶೈಕ್ಷಣಿಕ ಹಾಗೂ ಸಹಕಾರಿ ಕ್ಷೇತ್ರದ ಧುರೀಣರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಈ ಮೂವರು ಪಿಕೆಪಿಎಸ್ ಕ್ಷೇತ್ರಕ್ಕೆ ಸ್ಪರ್ಧೆ ಬಯಸಿ ಟಿಕೆಟ್ ಗಾಗಿ ಪೈಪೋಟಿ ನಡೆಸಿದ್ದಾರೆ.

ಬಿಜೆಪಿಯಲ್ಲಿ ಹಲವರು: ಬಿಜೆಪಿಯಲ್ಲಿ ಹಾಲಿ ನಿರ್ದೇಶಕ ಕುಮಾರಗೌಡ ಜನಾಲಿ, ಹೊಸಕೋಟಿಯ ಹನಮಂತಗೌಡ ಪಾಟೀಲ, ಮಹಾಂತೇಶ ಮೆಣಸಗಿ, ಅಡಿವೆಪ್ಪ ಢಾಣಕಶಿರೂರ, ಸಿದ್ಧನಗೌಡ ಪಾಟೀಲ ಸೇರಿದಂತೆ 4 ರಿಂದ 6 ಜನರು ಪಿಕೆಪಿಎಸ್ ಕ್ಷೇತ್ರದ ಚುನಾವಣೆ ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಒಟ್ಟಿನಲ್ಲಿ ಯಾರಿಗೆ ಟಿಕೆಟ್ ದೊರೆಯಲಿದೆ ಎಂಬುದು ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT