ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಳೇದಗುಡ್ಡ: ಪಿಒಪಿ ಮೂರ್ತಿಗಳ ವಶ

Last Updated 5 ಸೆಪ್ಟೆಂಬರ್ 2018, 16:28 IST
ಅಕ್ಷರ ಗಾತ್ರ

ಬಾಗಲಕೋಟೆ: ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ವಿಗ್ರಹಗಳ ಮಾರಾಟದ ವಿರುದ್ಧ ಇಲ್ಲಿನ ಜಿಲ್ಲಾಡಳಿತ ಸಮರವನ್ನೇ ಸಾರಿದೆ.

ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ಗುಳೇದಗುಡ್ಡ, ರಬಕವಿ ಸೇರಿದಂತೆ ವಿವಿಧೆಡೆ ಬುಧವಾರ ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳನ್ನು ಅಲ್ಲಿನ ಸ್ಥಳೀಯಾಡಳಿತ ಸಂಸ್ಥೆಗಳ ನೆರವಿನಿಂದ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಗುಳೇದಗುಡ್ಡದಲ್ಲಿ 74 ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೆಲ ದಿನಗಳ ಹಿಂದೆ ಜಮಖಂಡಿ ತಾಲ್ಲೂಕು ಸಾವಳಗಿಯಲ್ಲಿ ಅಲ್ಲಿನ ತಹಶೀಲ್ದಾರ್ ಪ್ರಶಾಂತ ಚನಗೊಂಡ ದಾಳಿ ನಡೆಸಿ 600ಕ್ಕೂ ಹೆಚ್ಚು ಮೂರ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದ್ದರು.

ಜಿಲ್ಲಾಡಳಿತದ ಆದೇಶ: ಜಿಲ್ಲಾಧಿಕಾರಿ ಕೆ.ಜಿ.ಶಾಂತರಾಮ್ ಆದೇಶ ಹೊರಡಿಸಿದ್ದು, ಕೆರೆ, ಬಾವಿ, ನದಿ, ಹಳ್ಳ ಸೇರಿದಂತೆಜಿಲ್ಲೆಯ ಯಾವುದೇ ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ಮಾಡಿದ ವಿಗ್ರಹಗಳನ್ನು ವಿಸರ್ಜಿಸುವಂತಿಲ್ಲ ಎಂದು ಹೇಳಿದ್ದಾರೆ. ಆದೇಶ ಉಲ್ಲಂಘಿಸಿದಲ್ಲಿ ₹10 ಸಾವಿರ ದಂಡ ಹಾಗೂ ಜೈಲು ಶಿಕ್ಷೆ ವಿಧಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT