ಹವಾಮಾನ ವೈಪರೀತ್ಯ: ಕೃಷ್ಣೆಗೆ ಬಾಗಿನ ಅರ್ಪಣೆ ಮುಂದೂಡಿಕೆ

7

ಹವಾಮಾನ ವೈಪರೀತ್ಯ: ಕೃಷ್ಣೆಗೆ ಬಾಗಿನ ಅರ್ಪಣೆ ಮುಂದೂಡಿಕೆ

Published:
Updated:

ಆಲಮಟ್ಟಿ (ಬಾಗಲಕೋಟೆ): ಹುಬ್ಬಳ್ಳಿಯಿಂದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರಯಾಣಿಸಬೇಕಿದ್ದ ಹೆಲಿಕಾಪ್ಟರ್ ಹವಾಮಾನ ವೈಪರಿತ್ಯದಿಂದಾಗಿ ಟೇಕ್ ಆಫ್ ಆಗಲು ಅನುಮತಿ ಸಿಗದ ಕಾರಣ ಆಲಮಟ್ಟಿ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

‌ಕಾರ್ಯಕ್ರಮ ರದ್ದಾದ ವಿಚಾರವನ್ನು ಬೇರೆ ರೀತಿಯಲ್ಲಿ ಬಿಂಬಿಸದಂತೆ ಮಾಧ್ಯಮಗಳಿಗೆ ಮನವಿ ಮಾಡಿದ ಅವರು, ಕಳೆದ ಎರಡು ಗಂಟೆಗಳಿಂದ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ನೀರಾವರಿ ಸಚಿವ ಡಿ.ಕೆ.ಶಿವಕುಮಾರ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಕಾದು ಕುಳಿತಿದ್ದಾರೆ. ಕುಮಾರಸ್ವಾಮಿ ಊಟ ಕೂಡ ಮಾಡಿಲ್ಲ. ಹುಬ್ಬಳ್ಳಿಯಲ್ಲಿ ಭಾರಿ ಮಳೆ ಹಾಗೂ ಈ ಭಾಗದಲ್ಲಿ ಹವಾಮಾನ ವೈಪರಿತ್ಯದ ಕಾರಣ ಹೆಲಿಕಾಪ್ಟರ್ ಹಾರಾಟಕ್ಕೆ ಅನುಮತಿ ದೊರೆತಿಲ್ಲ ಎಂದರು.

ವಾಡಿಕೆಗಿಂತ ಒಂದು ತಿಂಗಳ ಮೊದಲೇ ಆಲಮಟ್ಟಿ ಜಲಾಶಯ ಮೈದುಂಬಿದ್ದು, ಕೃಷ್ಣೆಗೆ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಎಚ್.ಡಿ.ಕುಮಾರಸ್ವಾಮಿ ಅವರು ಆಯೋಜಿಸಿಕೊಂಡಿದ್ದರು. ಆದರೆ, ಮುಂಜಾನೆಯಿಂದ ಬಿರುಸುಗೊಂಡಿದ್ದ ಮಳೆಯಿಂದ ಹೆಲಿಕಾಪ್ಟರ್ ಟೇಕ್ ಆಫ್ ಆಗಲು ಅನುಮತಿ ಸಿಗದ ಕಾರಣ ಬಾಗಿನ ಅರ್ಪಿಸುವ ಕಾರ್ಯಕ್ರಮವನ್ನು ಇಂದು ರದ್ದುಗೊಳಿಸಿ, ಸೆಪ್ಟೆಂಬರ್‌ ತಿಂಗಳಲ್ಲಿ ಹಮ್ಮಿಕೊಳ್ಳಲಾಗುವುದು. ಅಷ್ಟರೊಳಗೆ ಸ್ಥಳಿಯ ಸಂಸ್ಥೆ ಚುನಾವಣೆ ನೀತಿಸಂಹಿತೆಯೂ ಪುಇರ್ಣಗೊಳ್ಳಲಿದೆ. ಬಾಗಿನ ಬಿಡುವ ದಿನಾಂಕವನ್ನು ಶೀಘ್ರ ಪ್ರಕಟಿಸಲಾಗುವುದು ಎಂದರು.

Tags: 

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !