ಜಮಖಂಡಿ: ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲ್ಲೂಕಿನ ಪೂರ್ವ ಮುಂಗಾರು ಹಂಗಾಮು ಬೆಳೆ ಸಮೀಕ್ಷೆ ಕಾರ್ಯ ಆಗಸ್ಟ್ 7ರ ವರೆಗೆ ಇದ್ದು, ರೈತರು ಕಳೆದ ವರ್ಷದಂತೆ ಈ ವರ್ಷವೂ ಬೆಳೆ ಸಮೀಕ್ಷೆ ಕಾರ್ಯದಲ್ಲಿ ಜಮೀನಿನಲ್ಲಿ ಬೆಳೆದ ಬೆಳೆಗಳ ವಿವರವನ್ನು ದಾಖಲಿಸಲು ಹಾಗೂ ಖಾಸಗಿ ನಿವಾಸಿಗಳ ಮೂಲಕ ಬೆಳೆ ವಿವರಗಳನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಸಿದ್ದಪ್ಪ ಪಟ್ಟಿಹಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬೆಳೆ ಸಮೀಕ್ಷೆ ಕೈಗೊಂಡು ನಮೂದಾಗಿರುವ ಬೆಳೆ ವಿವರಗಳನ್ನು ಗಮನಿಸಿ ಸರಿಯಾಗಿವೆಯೋ ಅಥವಾ ತಪ್ಪಾಗಿದೆಯೋ ಎಂದು ಬೆಳೆ ದರ್ಶಕ ಆ್ಯಪ್ನಲ್ಲಿ ಪರೀಕ್ಷಿಸಿಕೊಳ್ಳಬೇಕು. ರೈತರು ಬೆಳೆದ ಬೆಳೆಗಳ ವಿವರ ಬಿಟ್ಟು ಹೋದಲ್ಲಿ ಅಥವಾ ಕ್ಷೇತ್ರ ವಿವರ ತಪ್ಪಾಗಿದ್ದಲ್ಲಿ ಆಕ್ಷೇಪಣೆಗಳನ್ನು ಸಲ್ಲಿಸಲು ಆಗಸ್ಟ್ 7ರ ವರೆಗೆ ಅವಕಾಶವಿರುತ್ತದೆ. ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ತಾಂತ್ರಿಕ ಸಹಾಯಕ್ಕಾಗಿ ಹತ್ತಿರದ ಗ್ರಾಮ ಆಡಳಿತಾಧಿಕಾರಿಗಳ ಕಚೇರಿ ಅಥವಾ ರೈತ ಸಂಪರ್ಕ ಕೆಂದ್ರಗಳಿಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.