ಬಾಗಲಕೋಟೆ: ಪ್ರಧಾನಿ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿಯಾಗುವುದು ನಿಶ್ಚಿತ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.

ಬಸವೇಶ್ವರ ಮಂಗಲ ಭವನದಲ್ಲಿ ಶನಿವಾರ ಬಿಜೆಪಿ ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಹಮ್ಮಿಕೊಂಡಿದ್ದ ಲೋಕಸಭಾ ಚುನಾವಣೆಯ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲ ಬಿಜೆಪಿ ಮುಖಂಡರ ಸಹಕಾರದಿಂದ ಮತ್ತೊಮ್ಮೆ ನನ್ನನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದಾರೆ. ದೇಶದ ಅಭಿವೃದ್ಧಿಗೆ ಮೋದಿ ಅವಶ್ಯವಾಗಿದ್ದಾರೆ ಎಂದರು.

ಜಿಲ್ಲೆಯಲ್ಲಿ ಆಗಿರುವ ಅನೇಕ ಅಭಿವೃದ್ಧಿಯ ಪರ ಕೆಲಸಗಳ ಬಗ್ಗೆ ತೃಪ್ತಿಯಿದೆ, ಪ್ರಾಮಾಣಿಕವಾಗಿ ಸೇವೆ ಮಾಡಿದ್ದೇನೆ. ಮೋದಿಯವರ ಅಭಿವೃದ್ಧಿ ಪರ ಯೋಜನೆಗಳಿಂದಾಗಿ ಜಗತ್ತು ಭಾರತದತ್ತ ತಿರುಗಿ ನೋಡುತ್ತಿದೆ ಎಂದು ಹೇಳಿದರು.

ಅಧ್ಯಕ್ಷತೆವಹಿಸಿದ್ದ ಮಾಜಿ ಶಾಸಕ ವೀರಣ್ಣ ಚರಂತಿಮಠ ಮಾತನಾಡಿ, ನಿಜ ಭಾರತದ ಕನಸು ನನಸಾಗಲು ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕು. ರಾಮ ಮಂದಿರ ನಿರ್ಮಾಣ, ಸಿಎಎ ಜಾರಿ, ತ್ರಿವಳಿ ತಲಾಖ್ ನಿಷೇಧ, ರಾಷ್ಟ್ರೀಯ ಶಿಕ್ಷಣ ನೀತಿ ಸೇರಿದಂತೆ ಹಲವು ಯೋಜನೆ ಜಾರಿಗೊಳಿಸಿದ್ದಾರೆ ಎಂದರು.

ಬೆಳಗಾವಿ ವಿಭಾಗೀಯ ಸಹ ಪ್ರಭಾರಿ ಬಸವರಾಜ ಯಂಕಂಚಿ, ಗ್ರಾಮೀಣ ಮಂಡಲ ಅಧ್ಯಕ್ಷ ಸುರೇಶ ಕೊಣ್ಣೂರ, ನಗರ ಮಂಡಲ ಅಧ್ಯಕ್ಷ ಬಸವರಾಜ ಹುನಗುಂದ. ಮುಖಂಡರಾದ ಜಿ.ಎನ್. ಪಾಟೀಲ, ಲಕ್ಷ್ಮೀ ನಾರಾಯಣ ಕಾಸಟ್, ಅಶೋಕ ಲಿಂಬಾವಳಿ, ರಾಜು ರೇವಣಕರ, ಜಯಂತ ಕುರಂದವಾಡ, ಸತ್ಯನಾರಾಯಣ ಹೇಮಾದ್ರಿ, ಕುಮಾರ ಯಳ್ಳಿಗುತ್ತಿ, ಶಿವಾನಂದ ಟವಳಿ, ಶಿವಪುತ್ರಪ್ಪ ಕಣಗಿ, ಸಂಗಣ್ಣ ಕಲಾದಗಿ ಮತ್ತಿತರರು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.