ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಗಲಕೋಟೆ: ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದಲೇ ಖಾಸಗಿ ವಾಹನಗಳ ಓಡಾಟ ಆರಂಭ

Last Updated 7 ಏಪ್ರಿಲ್ 2021, 6:47 IST
ಅಕ್ಷರ ಗಾತ್ರ

ಬಾಗಲಕೋಟೆ: ಬಸ್ ಇಲ್ಲದೇ ಪ್ರಯಾಣಿಕರಿಗೆ ಆಗಿರುವ ತೊಂದರೆ ತಪ್ಪಿಸಲು ಜಿಲ್ಲಾಡಳಿತ ಬುಧವಾರ ಬೆಳಿಗ್ಗೆ ಪರ್ಯಾಯ ವ್ಯವಸ್ಥೆ ಮಾಡಿದೆ.

ಹೀಗಾಗಿ ಬಾಗಲಕೋಟೆ ಬಸ್ ನಿಲ್ದಾಣಕ್ಕೆ ಮ್ಯಾಕ್ಸಿ ಕ್ಯಾಬ್, ಟಿಂಪೋ ಬಂದು ಪ್ರಯಾಣಿಕರನ್ನು ಕರೆದೊಯ್ಯುತ್ತಿವೆ. ಬೆಳಿಗ್ಗೆಯಿಂದ ಪ್ರಯಾಣಿಕರ ಪರದಾಟ ತಪ್ಪಿಸಲು ಬಸ್ ನಿಲ್ದಾಣದ ಒಳಗೆ ತೆರಳಲು ಖಾಸಗಿ ವಾಹನಗಳಿಗೆ ಅಧಿಕಾರಿಗಳು ಆಹ್ವಾನ ನೀಡಿದರು.

'ಜಿಲ್ಲೆಯ ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಖಾಸಗಿ ವಾಹನಗಳ ಓಡಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಬಾಗಲಕೋಟೆ ಬಸ್ ನಿಲ್ದಾಣದಲ್ಲಿ ಮೊಕ್ಕಾಂ ಹೂಡಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್ ಟಿಒ) ಯಲ್ಲಪ್ಪ ಪಡಸಾಲಿ ಪ್ರಜಾವಾಣಿ ಗೆ ತಿಳಿಸಿದರು.

ಬಸ್ ಟಿಕೆಟ್ ದರದಲ್ಲಿಯೇ ಖಾಸಗಿಯವರು ವಾಹನ ಓಡಿಸಲು ಒಪ್ಪಿಕೊಂಡಿದ್ದಾರೆ. ಹೀಗಾಗಿ ನಿಲ್ದಾಣದ ಒಳಗೆ ಬರಲು ಸಾರಿಗೆ ಸಂಸ್ಥೆ ಅಧಿಕಾರಿಗಳು ಅವಕಾಶ ಮಾಡಿಕೊಟ್ಟರು. ಜಿಲ್ಲೆಯಾದ್ಯಂತ 150ಕ್ಕೂ ಹೆಚ್ಚು ಖಾಸಗಿ ವಾಹನಗಳನ್ನು ಪರ್ಯಾಯ ಸಾರಿಗೆ ವ್ಯವಸ್ಥೆಗೆ ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಯಲ್ಲಪ್ಪ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT