ಬಾಗಲಕೋಟೆ: ವಿವಿಧ ಯೋಜನೆಗಳಡಿ ಕೈಗೊಂಡ ಕಾಮಗಾರಿಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸುವುದರ ಜೊತೆಗೆ ಗುಣಮಟ್ಟಕ್ಕೆ ಆದ್ಯತೆ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಾಣಾಧಿಕಾರಿ ಅಧಿಕಾರಿ ಶಶಿಧರ ಕುರೇರ, ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ಜರುಗಿದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನದಲ್ಲಿ ತಾಲ್ಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಜವಾಬ್ದಾರಿ ಅರಿತು ಕೆಲಸ ನಿರ್ವಹಿಸಬೇಕು ಎಂದರು.

ಗ್ರಾಮೀಣ ಭಾಗದ ಅಭಿವೃದ್ಧಿ ಚಟುವಟಿಕೆಗಳಿಗೆ ನರೇಗಾ ಸಹಕಾರಿಯಾಗಿದ್ದು, ಈ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ಅರ್ಧಕ್ಕೆ ನಿಲ್ಲಿಸಬಾರದು. ಗುಣಮಟ್ಟ ಕಾಯ್ದುಕೊಳ್ಳುವುದರ ಜೊತೆಗೆ ಪೂರ್ಣಗೊಳಿಸುವ ನಿಟ್ಟಿನಲ್ಲಿ ಹೆಚ್ಚಿನ ಮುತುವರ್ಜಿವಹಿಸಿ ಕೆಲಸ ಮಾಡಬೇಕು. ಬಾಕಿ ಉಳಿದಿರುವ ಸಿವಿಲ್ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.

ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರ ವಸೂಲಾತಿಯಲ್ಲಿ ಶೇ3ರಷ್ಟು ಬಿಕ್ಷುಕರ ವಂತಿಗೆ ಮೊತ್ತವನ್ನು ಕೇಂದ್ರ ಪರಿಹಾರ ಸಮಿತಿಗೆ ಪಾವತಿಸುವಲ್ಲಿ ಗ್ರಾಮ ಪಂಚಾಯತಿಗಳು ಬಾಕಿ ಉಳಿಸಿಕೊಂಡಿವೆ. ವಂತಿಗೆ ಮೊತ್ತ ಪಾವತಿಗೆ ಕ್ರಮವಹಿಸಲು ಕ್ರಮ ವಹಿಸಬೇಕು. ವಸತಿ ಯೋಜನೆಯಡಿ ಗುರಿಗೆ ತಕ್ಕಂತೆ ಫಲಾನುಭವಿಗಳ ಆಯ್ಕೆ ಮಾಡಬೇಕು ಎಂದರು.

ಗ್ರಾಮ ಪಂಚಾಯಿತಿ ಸಿಬ್ಬಂದಿ, ಗ್ರಂಥಾಲಯ ಮೇಲ್ವಿಚಾರಕರ ವೇತನ ಪಾವತಿ ಸಕಾಲಕ್ಕೆ ಆಗಬೇಕು. ಜೊತೆಗೆ ವಾಹನ ಚಾಲಕರ ಮತ್ತು ಸ್ವಚ್ಚತಾಗಾರರ ಗೌರವಧನ ಪಾವತಿಗೆ ಕ್ರಮವಹಿಸಬೇಕು. ಗ್ರಾಮ ಪಂಚಾಯಿತಿ ಕಡ್ಡಾಯವಾಗಿ ಬಯೋಮೆಟ್ರಿಕ್ ಹಾಜರಾತಿ ಹಾಕಬೇಕು. ಮಕ್ಕಳ ಗ್ರಾಮ ಸಭೆ ಹಾಗೂ ಸಾಮಾನ್ಯ ಸಭೆ ಜರುಗಿಸಿದ ಕುರಿತು ಮಾಹಿತಿ ಪಡೆದುಕೊಂಡರು.

ಜಲ ಜೀವನ ಮಿಷನ್ ಯೋಜನೆಯಡಿ ಏಕ, ಬಹು ಗ್ರಾಮ ಕುಡಿಯುವ ನೀರಿನ ಯೋಜನೆ, ಶುದ್ದ ಕುಡಿಯುವ ನೀರಿನ ಘಟಕಗಳ ನಿರ್ವಹಣೆ, ತಾಲ್ಲೂಕು ಟಾಸ್ಕ್ಫೋರ್ಸ್ ಸಮಿತಿ ಬಗ್ಗೆ ಚರ್ಚಿಸಲಾಯಿತು. ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ವೈಯಕ್ತಿಕ ಹಾಗೂ ಸಮುದಾಯ ಶೌಚಾಲಯ ನಿರ್ಮಾಣವಾಗಬೇಕು. ದೂರು ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಸಹಾಯಕ ಉಪಕಾರ್ಯದರ್ಶಿ ಎಸ್.ಎಂ. ಕಾಂಬಳೆ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.