ಮುಧೋಳ: ರಾಜ್ಯದ ಕಾಂಗ್ರೆಸ್ ಸರ್ಕಾರವನ್ನು ಅಸ್ಥಿರಗೊಳಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಗೆ ಮಸಿ ಬಳಿಯಲು ಪ್ರಯತ್ನಿಸುತ್ತಿರುವ ಬಿಜೆಪಿ , ಜೆಡಿಎಸ್ ಹಾಗೂ ರಾಜ್ಯಪಾಲರ ನಡೆ ಖಂಡಿಸುತ್ತೇವೆ ಎಂದು ಹೋರಾಟಗಾರ ಯಲ್ಲಪ್ಪ ಹೆಗಡೆ ಹೇಳಿದರು.
ಅವರು ಸೋಮವಾರ ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯಪಾಲರ ನಡೆ ಖಂಡಿಸಿ ನಗರದ ರನ್ನ ಸರ್ಕಲ್‌ನಲ್ಲಿ ಮಾನವ ಸರಪಳಿ ನಿರ್ಮಿಸಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ಅಲ್ಪಸಂಖ್ಯಾತ ಜಿಲ್ಲಾ ಘಟಕದ ಅಧ್ಯಕ್ಷ ಶಫೀಕ್ ಬೇಪಾರಿ ಮಾತನಾಡಿ, ಯಾರಿಂದಲೂ ಸರ್ಕಾರವನ್ನು ಅಸ್ಥಿರಗೊಳಿಸಲು ಸಾಧ್ಯವಿಲ್ಲ ಎಂದರು.