ಬುಧವಾರ, ಜನವರಿ 29, 2020
23 °C

ಬಾಗಲಕೋಟೆ: ಪೌರತ್ವ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗಲಕೋಟೆ: ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ಹಾಗೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ವಿರೋಧಿಸಿ ಮುಸ್ಲಿಮ್ ಸಂಘಟನೆಗಳು ಹಾಗೂ ದಲಿತ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮುಧೋಳ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆದಿದೆ.

ನಗರದ ಅಂಬೇಡ್ಕರ್ ವೃತ್ತದಿಂದ ಆರಂಭವಾದ ಬೃಹತ್ ಮೆರವಣಿಗೆ ಶಿವಾಜಿ ವೃತ್ತ, ಮಹಾಕವಿ ರನ್ನ ವೃತ್ತದ ಮೂಲಕ ಹಾಯ್ದು ತಹಶೀಲ್ದಾರ ಕಚೇರಿ ಆವರಣ ತಲುಪಿ ಅಲ್ಲಿ ಪ್ರತಿಭಟನಾ ಸಭೆಯಾಗಿ ಮಾರ್ಪಟ್ಟಿದೆ.

ಪ್ರತಿಭಟನಾಕಾರರು ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಗೃಹಸಚಿವ ಅಮಿತ್ ಶಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು